ಜುಲೈ ತಿಂಗಳ ಬಿಲ್ ಆಗಸ್ಟ್ನಲ್ಲಿ ಬರಲಿದೆ: ಗೃಹ ಜ್ಯೋತಿ ಜುಲೈನಿಂದಲೇ ಪ್ರಾರಂಭ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್ನಲ್ಲಿ ಬರಲಿದೆ. ಆಗ ಎಲ್ಲರಿಗೂ ಉಚಿತವಾಗಿ ಕೊಡುತ್ತೇವೆ ಎಂದರು.
ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರದಿ ಹಿನ್ನೆಲೆ ಪ್ರತಿಕ್ರಿಯಿಸಿದ ಸಚಿವರು, ಯಾವ ಮಂತ್ರಿ ಮಂಡಲದಲ್ಲೂ ಸೂಕ್ಷ್ಮ ವಲಯದ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್ ಉಪ ಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ.
ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್ನಲ್ಲಿ ತೀರ್ಮಾನವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ ಜೆ ಜಾರ್ಜ್ ಸ್ಪಷ್ಟಪಡಿಸಿದರು.
Laxmi News 24×7