Breaking News

ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ

Spread the love

ಕಲಬುರಗಿ: ಬಿಜೆಪಿಯವರು ತಮ್ಮ ಮನೆಯ ಹುಳಕನ್ನು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ.

ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ತಮ್ಮ ಮನೆಯಲ್ಲಿನ ಹುಳುಕನ್ನು ಸರಿಪಡಿಸಿಕೊಳ್ಳಲಾಗದೇ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಆದಾಗ್ಯೂ, ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಎರಡೂವರೆ ತಿಂಗಳಾದರೂ ಸಹ ವಿಧಾನಸಭೆ ಹಾಗೂ ವಿಧಾನ ಪರಿಷತ್‍ನಲ್ಲಿ ಬಿಜೆಪಿಯು ವಿರೋಧ ಪಕ್ಷದ ನಾಯಕನಿಗೆ ಆಯ್ಕೆ ಮಾಡಲು ಆಗಿಲ್ಲ. ಅವರ ಮನೆಯ ಹುಳುಕು ಮುಚ್ಚಿಕೊಳ್ಳಲು ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರತಿ ಪಕ್ಷದ ನಾಯಕ ಯಾರು ಎಂಬುದು ಜನ ಕೇಳುವುದಕ್ಕೆ ಮುಂದಾಗಿದ್ದಾರೆ. ಬಜೆಟ್ ಪಾಸ್ ಆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದು ಅವರು ಲೇವಡಿ ಮಾಡಿದರು.

ಇಡೀ ಭಾರತದಲ್ಲಿಯೇ ಕರ್ನಾಟಕ ವಿಧಾನಮಂಡಲಕ್ಕೆ ಒಂದು ಒಳ್ಳೆಯ ಹೆಸರು ಇದೆ. ಆದಾಗ್ಯೂ, ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಹಾಗೂ ರಾಜ್ಯಪಾಲರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಮಾಡುವುದಕ್ಕೂ ಸಹ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗದ ಬಿಜೆಪಿ ಅಯೋಗ್ಯವಾಗಿದೆ. ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ ಎಂದು ಕಿಡಿ ಕಾರಿದರು.

ಹೊಸ ತಾಲೂಕುಗಳಿಗೆ ಹಂತ -ಹಂತವಾಗಿ ಮೂಲಸೌಕರ್ಯ: ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ – ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ