ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಯನೀಯ ಸ್ಥಿತಿಗೆ ಹೋಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾಗುತ್ತಿಲ್ಲ. ಎರಡು ಕಡೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡೋಕೆ ಆಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬಂದು ನೂರಾರು ಕಡೆ ಪ್ರಚಾರ ಮಾಡಿದರು. ಆದ್ರೆ ಫಲಿತಾಂಶ ಏನಾಯ್ತು? ಲೋಕಸಭಾ ಚುನಾವಣೆಯಲ್ಲಿಯೂ ಇದೇ ರೀತಿ ಆಗುತ್ತೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ೧೫ ರಿಂದ ೨೦ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ದೆಹಲಿಯಲ್ಲಿ ವರಿಷ್ಠರೊಂದಿಗೆ ರಾಜ್ಯದ ಪರಿಸ್ಥಿತಿ ಕುರಿತಂತೆ ಚರ್ಚೆ ಆಗಲಿದ್ದು, ಒಂದು ಕ್ಷೇತ್ರದ ಬಗ್ಗೆ ಅಲ್ಲ, ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಂಘಟನೆ ಹಾಗೂ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಯಾಗಲಿದ್ದು ಜೊತೆಗೆ ಮುಂದಿನ ಲೋಕಸಭೆ ಚುನಾವಣೆ, ಸಂಘಟನೆ ದೃಷ್ಟಿಯಿಂದ ಸಭೆ ಕರೆದಿದ್ದು, ವರಿಷ್ಠರ ಕರೆ ಮೇರೆಗೆ ಇಂದು ದೆಹಲಿಗೆ ಹೊರಟಿದ್ದೇನೆಂದರು.