Breaking News

ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

Spread the love

ಚಿಕ್ಕೋಡಿ (ಬೆಳಗಾವಿ): ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ ಕರೆದಿದೆ.

ಈ ನಿಟ್ಟಿನಲ್ಲಿ ಕೆಲವರು ದೆಹಲಿಗೆ ಹೊರಟಿದ್ದೇವೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರು ದೂರು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ಅದೆಲ್ಲ ಮುಗಿದು ಹೋದ ಅಧ್ಯಾಯ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದು ಎಲ್ಲಾ ಸರಿ ಮಾಡುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಆಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಿಗೇ ಜವಾಬ್ದಾರಿ ನೀಡಲಾಗಿದೆ ಎಂದರು.

ಗ್ಯಾರಂಟಿ ಯೋಜನೆಯಿಂದಾಗಿ ಉಳಿದ ಅಭಿವೃದ್ಧಿ ಕಾಮಗಾರಿಗೆ ಹಣ ಕೊಡಲು ಆಗುವುದಿಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅಭಿವೃದ್ಧಿ ಮಾಡಕ್ಕಾಗಲ್ಲ ಎಂದು ಹೇಳಿಲ್ಲ. ಅನುದಾನ ಜಾಸ್ತಿ ಮಾಡಲು ಆಗುವುದಿಲ್ಲ ಎಂದಿದ್ದಾರೆ. ಕನಿಷ್ಠ ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇವೆ ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಕೋಲ್ಡ್‌ವಾರ್ ಎಂಬ ವಿಚಾರವಾಗಿ ಮಾತನಾಡಿ, ರಾಜಕೀಯದಲ್ಲಿ ಎಲ್ಲಾ ಕಡೆ ಕೋಲ್ಡ್​ ವಾರ್​ ಇದ್ದೇ ಇರುತ್ತದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ