Breaking News

ಗೃಹ ಜ್ಯೋತಿ ಯೋಜನೆ: ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ಈ ರೀತಿ ಮಾಹಿತಿ ತಿಳಿದು ಕೊಳ್ಳಿ

Spread the love

ರಂಜಿತ್‌ಬೆಂಗಳೂರು: : ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ಬಿಲ್ ಪಡೆಯುವ ಯೋಜನೆಯ ಇದೇ ಆಗಸ್ಟ್‌ 1ರಿಂದ ಅಂದ್ರೆ ನಿನ್ನೆಯಿಂದ ಶುರುವಾಗಿದೆ. ಆಗಸ್ಟ್‌ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಯೋಚನೆಗೆ ಚಾಲನೆ ನೀಡಲಿದ್ದಾರೆ ಅಂತ ನಿನ್ನೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮಾಹಿತಿ ನೀಡಿದ್ದಾರೆ.

ಈ ನಡುವೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಅರ್ಹರಾಗಿದ್ದೇವೆಯೇ ಎನ್ನುವುದನ್ನು ಹೇಗೆ ತಿಳಿದುಕೊಳ್ಳಬಹುದು? ನಮಗೂ ಕೂಡ ಶೂನ್ಯ ಬಿಲ್‌ ಬರಲಿದ್ಯ ಎನ್ನುವುದು ಹಲವು ಮಂದಿಯಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಇದಕ್ಕೆಲ್ಲ ನಿನ್ನೆ ಕಂದಾಯ ಸಚಿವರೇ ಉತ್ತರ ನೀಡಿದ್ದು ಅದರ ವಿವರ ಈ ಕೆಳಕಂಡತಿದೆ.

2022- 2023 ಹಣಕಾಸು ವರ್ಷದ ಸರಾಸರಿ ಬಳಕೆಯನ್ನು ಪರಿಗಣಿಸಿ, ಪ್ರತಿ ಗ್ರಾಹಕರ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ 10 ಪ್ರತಿಶತವನ್ನು ನೀಡುವ ಮೂಲಕ ಮಾಸಿಕ ವಿದ್ಯುತ್ ಬಳಕೆಯ ಅಂದಾಜು ನಿರ್ಧರಿಸಲಾಗುತ್ತದೆ. ಆದಾಗ್ಯೂ, ಗರಿಷ್ಠ ಉಚಿತ ವಿದ್ಯುತ್ ಬಳಕೆಯ ಮಿತಿಯನ್ನು 200 ಯುನಿಟ್‍ಗಳಿಗೆ ನಿಬರ್ಂಧಿಸಲಾಗಿದೆ ಎಂದರು. ಸರಾಸರಿ ಬಳಸುವ ಯೂನಿಟ್ ವಿದ್ಯುತ್ 200 ಯೂನಿಟ್‍ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‍ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ, 200ಕ್ಕೂ ಹೆಚ್ಚು ಯೂನಿಟ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.

ಗೃಹ ಜ್ಯೋತಿ ಯೋಜನೆಯ ಪ್ರಮುಖ ವಿವರಗಳು:
• ರಾಜ್ಯದ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್‍ಗಳವರೆಗಿನ ವಿದ್ಯುತ್ ಬಳಕೆ ಉಚಿತ.
• 2023ರ ಆಗಸ್ಟ್‍ನಲ್ಲಿ ‘ಗೃಹ ಜ್ಯೋತಿ’ ಯೋಜನೆಯಿಂದ 1.42 ಕೋಟಿ ಕುಟುಂಬಗಳಿಗೆ ಲಾಭ.
• ಈ ಯೋಜನೆಯು ವಾಣಿಜ್ಯ ಗ್ರಾಹಕರಿಗೆ ಅನ್ವಯಿಸುವುದಿಲ್ಲ.
• 2022- 2023ರ ಹಣಕಾಸು ವರ್ಷದ ಸರಾಸರಿ ವಿದ್ಯುತ್ ಬಳಕೆಯನ್ನು ಗಣನೆಗೆ ತೆಗೆದುಕೊಂಡು ಪ್ರತಿ ಗ್ರಾಹಕರ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ 10 ಪ್ರತಿಶತವನ್ನು ಮಾಸಿಕ ವಿದ್ಯುತ್ ಬಳಕೆಯ ಅಂದಾಜು ನಿರ್ಧರಿಸಲಾಗುತ್ತದೆ.
• ಗರಿಷ್ಠ ಉಚಿತ ವಿದ್ಯುತ್ ಬಳಕೆಯ ಮಿತಿಯನ್ನು 200 ಯುನಿಟ್‍ಗಳಿಗೆ ನಿಬರ್ಂಧಿಸಲಾಗಿದೆ.
• ಪ್ರತಿ ಬಳಕೆದಾರರಿಗೆ ನಿಗದಿಪಡಿಸಲಾದ ತಿಂಗಳ ಸರಾಸರಿ ಯೂನಿಟ್‍ಗೆ ಅನುಗುಣವಾಗಿ ವಿದ್ಯುತ್ ಬಳಕೆ ಮಾಡುವ ಗ್ರಾಹಕರ ಬಿಲ್ ಮೊತ್ತ ಶೂನ್ಯವಾಗಿರುತ್ತದೆ.
• ನಿಗದಿತ ಸರಾಸರಿ ಬಳಕೆಯ ಮಿತಿ ಮೀರಿದರೂ 200 ಯೂನಿಟ್ ಒಳಗಿದ್ದರೆ ಹೆಚ್ಚುವರಿ ಯೂನಿಟ್‍ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ.
• ಗ್ರಾಹಕರ ಮಾಸಿಕ ಸರಾಸರಿ ಬಳಕೆಯು 200 ಯುನಿಟ್‍ಗಳನ್ನು ಮೀರಿದರೆ ಬಿಲ್‍ನ ಸಂಪೂರ್ಣ ಮೊತ್ತವನ್ನು ಪಾವತಿಸಬೇಕಾಗುತ್ತದೆ.
• ಯೋಜನೆಯ ಲಾಭ ಪಡೆಯಲು ಬಯಸುವ ಗ್ರಾಹಕರು ಸೇವಾ ಸಿಂಧು ಪೆÇೀರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ