Breaking News

ಸ್ವಿಚ್​ ​​ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ

Spread the love

ಕಾರವಾರ(ಉತ್ತರಕನ್ನಡ):ಸ್ವಿಚ್​ ​​ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಇಂದು ನಡೆದಿದೆ.

ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಗೆ ಸೇರಿದ 8 ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಗುಟಕರ್ ಮೃತಪಟ್ಟಿದೆ. 14 ವರ್ಷದ ಬಳಿಕ ದಂಪತಿಗೆ ಈ ಮಗು ಜನಿಸಿತ್ತು. ಕರುಳ‌ ಕುಡಿ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗ್ಗೆ ಮನೆಯಲ್ಲಿದ್ದ ವೇಳೆ ಕರೆಂಟ್ ಹೋಗಿದ್ದರಿಂದ ತಾಯಿ ಸಂಜನಾ ಚಾರ್ಜ್‌ಗೆ ಇಟ್ಟಿದ್ದ ಮೊಬೈಲ್‌ನ್ನು ತೆಗೆದಿದ್ದರು. ಈ ವೇಳೆ ಅವರು ಚಾರ್ಜರ್ ಬಂದ್ ಮಾಡುವುದನ್ನು ಮರೆತಿದ್ದರು. ಮಗು ಅಲ್ಲಿಯೇ ಆಟವಾಡಿಕೊಂಡಿದ್ದು ಚಾರ್ಜರ್‌ನ ಕೆಬಲ್ ನೆಲಕ್ಕೆ ಬಿದ್ದುಕೊಂಡಿತ್ತು. ಈ ವೇಳೆ ಕರೆಂಟ್ ಮತ್ತೆ ಬಂದಿದ್ದು ಕೈಯಲ್ಲಿ ಹಿಡಿದಿದ್ದ ಕೆಬಲ್ ಅನ್ನು ಮಗು ಬಾಯಿಗೆ ಹಾಕಿದೆ. ಕೂಡಲೇ ಶಾಕ್ ತಗುಲಿ ಮಗು ಸ್ಥಳದಲ್ಲೇ ಅಸ್ವಸ್ಥಗೊಂಡು ಬಿದ್ದಿದೆ. ತಕ್ಷಣ ತಾಯಿ ಸಂಜನಾ ಮನೆಯವರ ಸಹಾಯದಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಯಾವುದೇ ಪ್ರಯೋಜನವಾಗದೆ ಮಗು ಕೊನೆಯುಸಿರೆಳೆದಿದೆ. ಇನ್ನು ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ತಂದೆ ಕೂಡ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಮೃತ ಮಗುವಿನ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮೃತದೇಹ ಗ್ರಾಮಕ್ಕೆ ಬರುತ್ತಿದ್ದಂತೆ ಆಕ್ರಂದನ ಮುಗಿಲು ಮುಟ್ಟಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ