Breaking News

ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆಗೆ ಆದೇಶಿಸಿದ್ದಾರೆ.

Spread the love

ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ.‌ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ಕೊಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್​ ಖಾತೆಯಿಂದ ಬುಧವಾರ ಟ್ವೀಟ್ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ ಏನು?: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದು, 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23 ) ಮತ್ತು ಯುವಕ ರಘು (27) ಮೃತಪಟ್ಟಿದ್ದಾರೆ. ನಿನ್ನೆ (ಆ.1ರಂದು) ಈ ಘಟನೆ ನಡೆದಿದ್ದು, ನಗರಸಭೆಯಿಂದ ಪೂರೈಕೆಯಾಗುವ ನೀರನ್ನು ಸೇವಿಸದಂತೆ ಸ್ಥಳೀಯ ನಿವಾಸಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

 


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ