Breaking News

ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

Spread the love

ಬೆಂಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ.

ವಾಹನಗಳ ನಿಲುಗಡೆಗೆ ಅವಕಾಶ, ಮತ್ತು ನಿಷೇಧದ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು: ಡಾ.ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ, ಕೆ.ಹೆಚ್ ರಸ್ತೆಯ ಶಾಂತಿನಗರ ಬಸ್ ನಿಲ್ದಾಣದ ಪಾರ್ಕಿಂಗ್​ನಲ್ಲಿ ನಾಲ್ಕು ಚಕ್ರದ ವಾಹನಗಳು, ಮರಿಗೌಡ ರಸ್ತೆಯ ಹಾಪ್ ಕಾಮ್ಸ್​ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ, ಜೆಸಿ ರಸ್ತೆ, ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ