Breaking News

ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿ

Spread the love

ಕೊಚ್ಚಿ: ಆನ್​ಲೈನ್​ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಓರ್ವ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೊಚ್ಚಿಯಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಸ್​ನಲ್ಲಿ ಹೆಸರನ್ನು ಕೈಬಿಡಲು ಆರೋಪಿಗಳಿಂದ ಲಂಚ ಪಡೆದಿದ್ದರೆಂದು ಆರೋಪಿಸಲಾಗಿದೆ. ಹಣ ಪಡೆದು ಸಹ ಆರೋಪಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರ ಸಂಬಂಧಿಯೊಬ್ಬರು ಕೊಚ್ಚಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ತನಿಖೆಗಿಳಿದ ಕಲಮಶ್ಶೇರಿ ಪೊಲೀಸರು ವಾಹನ ತಡೆದು, ಕರ್ನಾಟಕದ ನಾಲ್ವರು ಪೊಲೀಸರನ್ನು ವಶಕ್ಕೆ ಪಡೆದು, 3.95 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ.

ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿಗಳಾಗಿದ್ದಾರೆ. ಕೇರಳ ವ್ಯಕ್ತಿಯೊಬ್ಬ ಆನ್​ಲೈನ್​ನಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ಬಂಧಿಸಲು ಬಂದು ಅವರಿಂದಲೇ ಲಂಚ ಪಡೆಯಲು ಮುಂದಾಗಿ ಸಿಕ್ಕಿಬಿದ್ದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪ್ರಕರಣವೇನು?: ಬೆಂಗಳೂರಿನಲ್ಲಿ ನಡೆದ ಆನ್‌ಲೈನ್ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಕೇರಳದ ಕೊಚ್ಚಿಯ ಮತ್ತಂಚೇರಿಯಲ್ಲಿ ಕರ್ನಾಟಕದ ಸೈಬರ್​ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಅವರನ್ನು ರಾಜ್ಯಕ್ಕೆ ಕರೆತರುವ ವೇಳೆ ಪ್ರಕರಣದಲ್ಲಿ ತಮ್ಮನ್ನು ಕೈಬಿಟ್ಟರೆ ಲಂಚ ನೀಡುವುದಾಗಿ ಆರೋಪಿಗಳು ಬೇಡಿಕೆ ಇಟ್ಟಿದ್ದರಂತೆ.

ಅದರಂತೆ ಓರ್ವ ಆರೋಪಿಯಿಂದ 3 ಲಕ್ಷ ಹಾಗೂ ಇನ್ನೊಬ್ಬನಿಂದ 1 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ಆದರೂ ಸಹ ಆರೋಪಿಯನ್ನು ಬಿಡುಗಡೆ ಮಾಡದೇ ಇರುವುದಕ್ಕೆ ರೊಚ್ಚಿಗೆದ್ದ ಅವರ ಕುಟುಂಬಸ್ಥರು, ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಅಲರ್ಟ್​ ಆದ ಕೊಚ್ಚಿಯ ಕಲಮಶ್ಶೇರಿ ಠಾಣಾ ಪೊಲೀಸರು, ಆರೋಪಿಗಳ ಕುಟುಂಬಸ್ಥರು ನೀಡಿದ ಮಾಹಿತಿಯಂತೆ ಬುಧವಾರ ರಾತ್ರಿ ವಾಹನ ತಡೆದು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ