Breaking News

PSI Scam: ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್​!

Spread the love

ಬೆಂಗಳೂರು : ಪೊಲೀಸ್​ ಸಬ್​ಇನ್​ಸ್ಪೆಕ್ಟರ್​ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆೆ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕವಾಗಿ ತಿಳಿಸಿದೆ.

ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್​ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ, ಪರೀಕ್ಷೆ ನಡೆಸುವ ಸಂಬಂಧ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಪ್ರಕರಣದಲ್ಲಿ ಹಿರಿಯ ವಕೀಲರು ವಾದ ಮಂಡಿಸಬೇಕಿದ್ದು, ಸ್ವಲ್ಪ ಸಮಯ ಅರ್ಜಿಯ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಸ್ವಲ್ಪ ಹೊತ್ತಿನವರೆಗೆ ಆಗಲ್ಲ, ಬೇಕಿದ್ದರೆ ಸೋಮವಾರ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ತಿಳಿಸಿತು.

PSI Scam: ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್​ ಮೌಖಿಕವಾಗಿ ತಿಳಿಸಿದೆ.

 

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ