ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ. ಹೌದು.. ಬಿಜೆಪಿ ತೆಕ್ಕೆಯಲ್ಲಿರೋ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅನುದಾನ ತಾರತಮ್ಯ ಕೇಳಿ ಬಂದಿದ್ದು, 15 ನೇ ಹಣಕಾಸಿನಲ್ಲಿ ಬಿಡುಗಡೆಯಾದ ಬರೋಬ್ಬರಿ 40 ಕೋಟಿ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆಯಂತೆ. ಬಿಜೆಪಿ ಪಾಲಿಕೆ ಸದಸ್ಯರಿಗೆ ಹೆಚ್ಚು ಅನುದಾನ ನೀಡಿರೋ ಆಡಳಿತ ಪಕ್ಷ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ಅನುದಾನ ತಾರತಮ್ಯ ಮಾಡಿರುವ ಬಗ್ಗೆ ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
Laxmi News 24×7