ರಾಜ್ಯದಾದ್ಯಂತ 6 ಕೆಲಸದ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮೂರು ಸುತ್ತುಗಳಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆ ಕಾರ್ಯಕ್ರಮ

Spread the love

ಬೆಂಗಳೂರು: ಮಿಷನ್ ಇಂದ್ರಧನುಷ್ 5.0 (IMI 5,0) ಕಾರ್ಯಕ್ರಮದಡಿ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ಅಭಿಯಾನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಸೌಧದಲ್ಲಿ ಶನಿವಾರ ಸಂಜೆ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ರಾಯಚೂರಿನಲ್ಲಿ ಆಗಸ್ಟ್ 7 ರಂದು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿನ ಎಲ್ಲಾ ಲಸಿಕೆಗಳನ್ನು ನೀಡಿ ಅವುಗಳ ಪ್ರಗತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. 2023 ರ ವೇಳೆಗೆ ದಡಾರ ಮತ್ತು ರುಬೆಲ್ಲಾವನ್ನು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5,0 (IMI 5.0) ಮೂಲಕ ನಿರ್ಮೂಲನ ಮಾಡುವ ಅಂತಿಮ ಉದ್ದೇಶ ಹೊಂದಿದೆ. ಕೊಳೆಗೇರಿಗಳು, ನಗರದ ಹೊರವಲಯ ಪ್ರದೇಶಗಳು, ಅಲೆಮಾರಿಗಳು, ಇಟ್ಟಿಗೆ ಗೂಡು/ನಿರ್ಮಾಣ ಸ್ಥಳಗಳು ಮತ್ತು ಇತರ ಹೆಚ್ಚಿನ ಅಪಾಯದಂಚಿನ ಪ್ರದೇಶಗಳ (ಮೀನುಗಾರರ ಹಳ್ಳಿಗಳು, ಚಹಾ/ಕಾಫಿ ಎಸ್ಟೇಟ್‌ಗಳಲ್ಲಿ ವಲಸೆ ಬಂದವರು ಇತ್ಯಾದಿ) 0-5 ವರ್ಷದ ಮಕ್ಕಳು ಮತ್ತು ಗರ್ಭಿಣಿಯರನ್ನು ಮುಖ್ಯವಾಗಿ ಕೇಂದ್ರೀಕರಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ 1,65,177 ಮಂದಿ ಲಸಿಕೆ ಪಡೆಯದ/ಬಿಟ್ಟು ಹೋದ ಮತ್ತು ಲಸಿಕಾಕರಣಕ್ಕೆ, ಬಾಕಿ ಇರುವ ಮಕ್ಕಳು ಮತ್ತು 32,917 ಗರ್ಭಿಣಿ ಮಹಿಳೆಯರಿಗೆ ಲಸಿಕೆ ಬಾಕಿ ಇದೆ. ಹಾಗಾಗಿ, ರಾಜ್ಯಾದ್ಯಂತ 6 ಕೆಲಸದ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮೂರು ಸುತ್ತುಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಸಲಾಗುವುದು. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ 2023 (7-12 ಆಗಸ್ಟ್ 11-16 ಸೆಪ್ಟೆಂಬರ್, ಮತ್ತು 9-14 ಅಕ್ಟೋಬರ್) ತಿಂಗಳುಗಳಿಗೆ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಹೆಡ್‌ಕೌಂಟ್ ಸಮೀಕ್ಷೆಯ ಮಾಹಿತಿಯು ಲಸಿಕಾಕರಣ ನಡೆಸಲು ಬೇಸ್‌ ಆಗಿರುತ್ತದೆ ಮತ್ತು ಫಲಾನುಭವಿಗಳನ್ನು ಯು-ವಿನ್‌ನಲ್ಲಿ ಮೊದಲೇ ನೋಂದಾಯಿಸಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿ ಸಭೆಗಳು, ತರಬೇತಿಗಳು, ಹೆಡ್‌ಕೌಂಟ್ ಸಮೀಕ್ಷೆಗಳು, ಸೂಕ್ತ ಕ್ರಿಯಾ ಯೋಜನೆ ತಯಾರಿ ಮತ್ತು U-WIN ನೋಂದಣಿಯಂತಹ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.) (IMI 50) ಗೆ ಸಂಬಂಧಪಟ್ಟ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ