Breaking News

ಬೆಳಗಾವಿ: ‘ಶಿಕ್ಷಣ, ಅವಕಾಶ ಹಾಗೂ ಯಶಸ್ಸಿನಿಂದ ಬಹು ದೂರ ಉಳಿದಿದ್ದ ಸಮುದಾಯಕ್ಕೂ ಅವಕಾಶ ಸಿಗುವಂತೆ ಮಾಡಿದ್ದು ಸಂವಿಧಾನ.

Spread the love

ಬೆಳಗಾವಿ: ‘ಶಿಕ್ಷಣ, ಅವಕಾಶ ಹಾಗೂ ಯಶಸ್ಸಿನಿಂದ ಬಹು ದೂರ ಉಳಿದಿದ್ದ ಸಮುದಾಯಕ್ಕೂ ಅವಕಾಶ ಸಿಗುವಂತೆ ಮಾಡಿದ್ದು ಸಂವಿಧಾನ. ಇಂಥ ಶ್ರೇಷ್ಠ ಸಂವಿಧಾನ ರಚನೆ ಮಾಡಿರುವ ಡಾ. ಬಿ ಆರ್ ಅಂಬೇಡ್ಕರ್ ಅವರು ವಂಚಿತರ ಪಾಲಿನ ಪ್ರಜ್ಞಾಸೂರ್ಯ ಎಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಶ್ಲಾಘಿಸಿದರು.

ನಗರದ ಕರ್ನಾಟಕ ಕಾನೂನು ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ಶನಿವಾರ ಸಂಜೆ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಕರ್ನಾಟಕ ಹೈಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಸತ್ಕರಿಸಿ ಮಾತನಾಡಿದ ವರಾಳೆ, ಈ ದೇಶದಲ್ಲಿ ಶೋಷಿತ, ಶಿಕ್ಷಣ ವಂಚಿತ, ತುಳಿತಕ್ಕೊಳಗಾದವರ ಸಂಖ್ಯೆ ಬಹಳಷ್ಟಿತ್ತು. ಶಿಕ್ಷಣ ವಂಚಿತರಾದ ಅವರೆಲ್ಲ ಅವಕಾಶಗಳಿಂದಲೂ ವಂಚಿತರಾಗಿ, ಇತರರಿಗಿಂತ ಸಾವಿರಾರು ಕಿಲೋಮೀಟರ್‌ ಹಿಂದೆ ನಿಲ್ಲುವ ಸ್ಥಿತಿಯಿತ್ತು. ಆದರೆ ಸಂವಿಧಾನ ಜಾರಿ ಬಂದ ಮೇಲೆ ನಾನೂ ಸೇರಿದಂತೆ, ನನ್ನಂತ ಎಷ್ಟೋ ಮಂದಿಗೆ ಸಾಕಷ್ಟು ಅವಕಾಶಗಳು ಲಭಿಸಿದವು ಎಂದರು.

ನೀವು ಯಶಸ್ಸಿನ ಬೆನ್ನು ಹತ್ತಬೇಡಿ. ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಿ, ಆಗ ಯಶಸ್ಸು ತನ್ನಿಂದ ತಾನೇ ನಿಮ್ಮ ಬೆನ್ನು ಹತ್ತಿ ಬರುತ್ತದೆ. ಯಶಸ್ಸಿಗೆ ಕಠಿಣ ಪರಿಶ್ರಮವೊಂದೇ ದಾರಿ. ಬೇರೆ ಅನ್ಯಮಾರ್ಗಗಳು ಇಲ್ಲ. ವಕೀಲಿ ವೃತ್ತಿ ಕೂಡ ಒಂದ ಕಾಯಕ. ವ್ಯವಹಾರ ಅಲ್ಲ ಎನ್ನುವುದನ್ನು ಯುವ ವಕೀಲರು ಅರ್ಥ ಮಾಡಿಕೊಳ್ಳಬೇಕು. ಕೇವಲ ಹಣ ಗಳಿಕೆ ಹಿಂದೆ ಹೋದರೆ ಯಶಸ್ಸು ಸಿಗುವುದಿಲ್ಲ. ನಾವು ಹುಟ್ಟಿ, ಬೆಳೆಯಲು ಕಾರಣವಾಗಿದ್ದು ಈ ಸಮಾಜ. ಸಮಾಜದ ಋಣ ತೀರಿಸಲು ನ್ಯಾಯ ಮಾರ್ಗವನ್ನೇ ಆಯ್ಕೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಮುಂದುವರೆದು, ರಾಜಾಲಖಮಗೌಡ ಕಾನೂನು ಕಾಲೇಜಿಗೆ ದೇಶದಲ್ಲಿ ತನ್ನದೇ ಆದ ಇತಿಹಾಸವಿದೆ. ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಟಿ ಎಸ್ ವೆಂಕಟರಾಮಯ್ಯ, ಎಸ್ ರಾಜೇಂದ್ರಬಾಬು, ಅಟಾರ್ನಿ ಜನರಲ್ ಆಗಿದ್ದ ಕೆ ಕೆ ವೇಣುಗೋಪಾಲ್ ಅವರು ಈ ಕಾಲೇಜಿನ ಹಳೆ ವಿದ್ಯಾರ್ಥಿಗಳು. ದೇಶಕ್ಕೆ ಅತ್ಯುತ್ತಮ ನ್ಯಾಯಮೂರ್ತಿಗಳು, ನ್ಯಾಯಾಧೀಶರು ಹಾಗೂ ವಕೀಲರನ್ನು ಕೊಟ್ಟ ಹೆಗ್ಗಳಿಕೆ ಈ ಕಾಲೇಜಿಗೆ ಸಲ್ಲುತ್ತದೆ ಎಂದರು.

ಇನ್ನು, ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಸಚಿನ್‌ ಶಂಕರ ಮಗದುಮ್‌, ರವಿ ವೆಂಕಪ್ಪ ಹೊಸಮನಿ, ಕೆ.ಎಸ್.ಹೇಮಲೇಖಾ ಪತಿ ರಾಘವೇಂದ್ರ ಕುಲಕರ್ಣಿ, ಅನಿಲ್‌ ಭೀಮಸೇನ ಕಟ್ಟಿ ಪತ್ನಿ ಅಂಜಲಿ ಹಾಗೂ ರಾಮಚಂದ್ರ ಡಿ. ಹುದ್ದಾರ ಪತ್ನಿ ಲತಾ ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ಪತ್ನಿ ಗೀತಾ ಅವರನ್ನೂ ಸತ್ಕರಿಸಲಾಯಿತು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ