Breaking News

ಮುಂಬೈ ಪೊಲೀಸರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ರೈಲುಗಳಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ.

Spread the love

ಮುಂಬೈ(ಮಹಾರಾಷ್ಟ್ರ) : ಗೃಹ ಸಚಿವ ಅಮಿತ್​ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ.

ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು, ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಶೋಕ್​ ಮುಖಿಯಾ ಎಂದು ಗುರುತಿಸಲಾಗಿದೆ. ಬೆದರಿಕೆ ಹಾಕಿದ್ದರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇಂದು ಬೆಳಗ್ಗೆ ಆರೋಪಿ ಮುಂಬೈ ಪೊಲೀಸ್​ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಲೋಕಲ್​ ಟ್ರೈನ್​ಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ. ಪೊಲೀಸರು ಯಾವ ರೈಲು, ಸ್ಥಳ ಎಂಬ ಬಗ್ಗೆ ಮಾಹಿತಿ ಕೇಳಿದಾಗ, ಕಾಲ್ ಕಟ್​ ಮಾಡಿದ್ದ. ಬಳಿಕ ಮೊಬೈಲ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದ. ಆತಂಕದ ವಾತಾವರಣ ಉಂಟಾದ ಬಳಿಕ ತಕ್ಷಣವೇ ಎಚ್ಚೆತ್ತ ಪೊಲೀಸರು ಕಾರ್ಯಾಚರಣೆಗೆ ಇಳಿದರು.

ಆರೋಪಿಯ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದ್ದಾರೆ. ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಯಿತು.

ಆರೋಪಿ ಅರೆಸ್ಟ್​; ಇನ್ನು, ಫೋನ್​ ಕರೆ ಬಂದ ಮಾಹಿತಿ ಆಧಾರದ ಅನ್ವಯ ಕಾಲ್​ ಟ್ರ್ಯಾಕ್​ ಮಾಡಿ ಆರೋಪಿ ಮುಖಿಯಾ ಎಂಬಾತನನ್ನು ಬಂಧಿಸಿದ್ದಾರೆ. ಈತ ಯಾಕಾಗಿ ಬೆದರಿಕೆ ಹಾಕಿದ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಮಗ್ರ ತನಿಖೆಯ ಬಳಿಕವೇ ಸತ್ಯ ಹೊರಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the loveಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ