Breaking News

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ B.J.P.ಹೈಕಮಾಂಡ್, ಬುಲಾವ್

Spread the love

ಬೆಂಗಳೂರು: ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಹೆಸರು ಅಂತಿಮಗೊಳಿಸಲು ವಿಳಂಬ ಮಾಡುತ್ತಿರುವ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬುಲಾವ್ ನೀಡಿದೆ.

ಬೊಮ್ಮಾಯಿ ಪರ ಯಡಿಯೂರಪ್ಪ ಒಲವಿರುವ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಬೊಮ್ಮಾಯಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥನಾರಾಯಣ್, ಆರಗ ಅಶೋಕ್, ಸುನೀಲ್ ಕುಮಾರ್ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಈ ಸಂಬಂಧ ಯತ್ನಾಳ್ ಸೇರಿದಂತೆ ಹಲವರ ಜೊತೆ ಹೈಕಮಾಂಡ್ ನಾಯಕರು ಮಾತುಕತೆಯನ್ನೂ ನಡೆಸಿದ್ದಾರೆ. ರಾಜ್ಯ ನಾಯಕರ ಅಭಿಪ್ರಾಯ ಕೂಡ ಸಂಗ್ರಹಿಸಿದ್ದಾರೆ. ಆದರೂ ಹೆಸರು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಗೆ ಚಾಲನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಬಲ ಹಿಂದು ಫೈರ್ ಬ್ರ್ಯಾಂಡ್. ಸದನದಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳಬಲ್ಲರಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಅಷ್ಟೇ ಪ್ರಬಲ ಸಂಸದೀಯ ಪಟುವಲ್ಲ. ಅಲ್ಲದೇ ಯಡಿಯೂರಪ್ಪ ಯತ್ನಾಳ್ ಹೆಸರಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದೀಗ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.

ಹೈಕಮಾಂಡ್ ಮುಂದೆ 2 ಅವಕಾಶದ ಆಯ್ಕೆ: ಯಡಿಯೂರಪ್ಪ ಅಭಿಪ್ರಾಯದಂತೆ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ನೀಡುವ ಕುರಿತು ಚರ್ಚಿಸುವುದು ಒಂದು ಕಡೆಯಾದರೆ, ಕೇಂದ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡುವುದು ಮತ್ತೊಂದು ಕಡೆ ಇದೆ. ಎರಡು ರೀತಿಯ ಅವಕಾಶದ ಆಯ್ಕೆ ಹೈಕಮಾಂಡ್ ಮುಂದಿದ್ದು, ಆ ಬಗ್ಗೆ ಚರ್ಚಿಸಲಾಗುತ್ತದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ