Breaking News

ಲೋಕಸಭೆ ಚುನಾವಣೆಯಲ್ಲೂ ಲಿಂಗಾಯತ ಅಸ್ತ್ರಕ್ಕೆ ಪ್ಲ್ಯಾನ್ ಬಿಜೆಪಿಯಿಂದ ಬಂದ ನಾಯಕರ ಮೂಲಕವೇ ಸ್ಕೆಚ್!

Spread the love

ಬೆಂಗಳೂರು, (ಆಗಸ್ಟ್ 06): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಅಭೂತಪೂರ್ವ ಗೆಲ್ಲುವ ಮೂಲಕ ಬಹುಮತ ಪಡೆದು ಅಧಿಕಾರ ಹಿಡಿದಿರುವ ಕಾಂಗ್ರೆಸ್​ (Congress) ಚಿತ್ತ ಇದೀಗ ಮುಂಬರುವ ಲೋಕಸಭೆ ಚುನಾವಣೆ ಮೆಲೆ ನೆಟ್ಟಿದೆ.

ಕರ್ನಾಟಕದಲ್ಲಿ ಗೆದ್ದ ಜೋಶ್​ನಲ್ಲೇ ಲೋಕಸಭಾ ಚುನಾವಣೆಗೆ(Loksabha Elections 2024) ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಹೈಕಮಾಂಡ್ ಸಹ ರಾಜ್ಯ ನಾಯಕರನ್ನು ದೆಹಲಿಗೆ ಕರೆಯಿಸಿಕೊಂಡು ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲುವಿನ ಟಾಸ್ಕ್ ನೀಡುವುದರ ಜೊತೆ ಕೆಲ ಸಲಹೆ ಸೂಚನೆಗಳನ್ನು ನೀಡಿ ಕಳುಹಿಸಿದೆ. ಹೀಗಾಗಿ ಮಿಷನ್ 20 ಹೆಗ್ಗುರಿಯನ್ನಿಟ್ಟುಕೊಂಡು ರಣ ತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ, ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಮತಧಾರೆ ಎರೆದ ಅಲ್ಪಸಂಖ್ಯಾತ ಹಾಗೂ ಲಿಂಗಾಯತರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಬಿಜೆಪಿಯಿಂದ ಬಂದ ನಾಯಕರ ಮೂಲಕವೇ ಸ್ಕೆಚ್!

ಕನಿಷ್ಠ 20 ಸ್ಥಾನ ಗೆಲ್ಲೋ ಗುರಿಯೊಂದಿಗೆ ಹೆಜ್ಜೆ ಇಟ್ಟಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬಿಗ್ ಟಾಸ್ಕ್ ಕೊಟ್ಟಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಬಂದ ನಾಯಕರಿಗೂ ಟಾಸ್ಕ್ ನೀಡಲಾಗಿದ್ದು, ಬಿಜೆಪಿಯ ಒಳ ಸುಳಿವಿನ ಅರಿವು ಇರುವವರಿಗೆ ಜವಾಬ್ದಾರಿ ನೀರುವ ಪ್ಲ್ಯಾನ್ ಮಾಡಲಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಲಕ್ಷ್ಮಣ್​ ಸವದಿಗೆ ಪಕ್ಷದ ಸಂಘಟನಾತ್ಮಕ ಹುದ್ದೆ, ಜಗದೀಶ್ ಶೆಟ್ಟರ್​ಗೆ ಸರ್ಕಾರದ ಮಟ್ಟದಲ್ಲಿ ಹುದ್ದೆ ನೀಡುವ ಸಾಧ್ಯತೆಗಳಿವೆ.

ಲೋಕಸಭೆ ಚುನಾವಣೆಯಲ್ಲೂ ಲಿಂಗಾಯತ ಅಸ್ತ್ರಕ್ಕೆ ಪ್ಲ್ಯಾನ್

ಲೋಕಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಅಸ್ತ್ರಕ್ಕೆ ರಾಜ್ಯ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ವಿಧಾನಸಭೆ ಚುನಾವಣೆ ಸಂಧರ್ಬದಲ್ಲೂ ರಾಜ್ಯ ಕಾಂಗ್ರೆಸ್ ಲಿಂಗಾಯತ ಅಸ್ತ್ರ ಪ್ರಯೋಗ ಮಾಡಿತ್ತು. ಬಿಜೆಪಿ ಲಿಂಗಾಯತರನ್ನ ಕಡೆಗಣನೆ ಮಾಡಿದೆ ಎಂದು ಸಂದೇಶ ರವಾನಿಸಿತ್ತು. ಇದಕ್ಕೆ ಪೂರಕವಾಗಿ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಶೆಟ್ಟರ್ ಸೋತರೂ ಸಹ ಕಾಂಗ್ರೆಸ್​ಗೆ ಲಾಭವಾಗಿದೆ. ಚುನಾವಣೆಯಲ್ಲಿ ಲಿಂಗಾಯತ ಮತ ಸಳೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಅದೇ ರೀತಿ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಬಂದ ನಾಯಕರಿಗೆ ಹುದ್ದೆ ನೀಡುವ ಮೂಲಕ ಮತಬೇಟೆಗೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ