Breaking News

ರಾಜ್ಯ ​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ.: ಅಶ್ವತ್ಥ್ ನಾರಾಯಣ

Spread the love

ಬೆಂಗಳೂರು, ಆಗಸ್ಟ್​ 06: ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ(Ashwath Narayan)ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್​​ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. ಅಧಿಕಾರ, ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್​ನವರು ಗ್ಯಾರಂಟಿ ಕೊಟ್ಟಿದ್ದಾರೆ. ಕಾಂಗ್ರೆಸ್​ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಜನ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.

ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ಮಾಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ