Breaking News

ತಮ್ಮ ಮೇಲೆ ಕೇಳಿ ಬಂದ ಲಂಚದ ಆರೋಪಕ್ಕೆ ಸಂಬಂಧಪಟ್ಟಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

Spread the love

ಮಂಡ್ಯ/ಬೆಂಗಳೂರು: ಕೃಷಿ ಸಚಿವರು ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಸ್ವತಃ ಕೃಷಿ ಇಲಾಖೆಯ ಅಧಿಕಾರಿಗಳೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಕಿಡಿಕಾರಿದ್ದಾರೆ.

ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಕೃಷಿ ಅಧಿಕಾರಿಗಳಿಂದ ದೂರು ಅರ್ಜಿ ಬಂದಿದ್ದು, ಈ ಬಗ್ಗೆ ನಿಯಮಾನುಸಾರ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕೆಂದು ಕೋರುವುದಾಗಿ ರಾಜ್ಯಪಾಲರ ಕಚೇರಿಯಿಂದ ಮುಖ್ಯಕಾರ್ಯದರ್ಶಿ ಅವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ”ತಲಾ 6 ರಿಂದ 8 ಲಕ್ಷ ರೂಪಾಯಿ ಬೇಡಿಕೆ ಇಡಲಾಗಿದೆ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲಂಚ ಕೇಳುವ ಇಂತಹ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ, ಅಧಿಕಾರಿಗಳು ಕುಟುಂಬ ಸದಸ್ಯರ ಜೊತೆಗೆ ವಿಷಯ ಕುಡಿಯುವುದಾಗಿ ತಿಳಿಸಿರುವುದರಿಂದ ಈ ದೂರಿನ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರುವುದಾಗಿ” ಮುಖ್ಯ ಕಾರ್ಯದರ್ಶಿ ಅವರಿಗೆ, ರಾಜ್ಯಪಾಲರ ಅಧೀನ ಕಾರ್ಯದರ್ಶಿ ಜೆ ಪ್ರದೀಪ್​ ಅವರು ಪತ್ರ ಬರೆದಿದ್ದಾರೆ.

 ರಾಜ್ಯಪಾಲರ ಕಚೇರಿಯಿಂದ ಬರೆದಿರುವ ಪತ್ರ


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ