Breaking News

ಬಿಬಿಎಂಪಿ ಹಣ ಬಿಡುಗಡೆಗೆ ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಗುತ್ತಿಗೆದಾರರು

Spread the love

ಬೆಂಗಳೂರು: ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಕುರಿತು ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು (ಸೋಮವಾರ) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು.

 

ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಗುತ್ತಿಗೆದಾರರು, ”ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ ಪಾವತಿಗೆ ಮೀನಮೇಷ ಎಣಿಸುತ್ತಿದ್ದಾರೆ. ಬಿಲ್ ಬಾಕಿ ಉಳಿಸಿಕೊಂಡು, ಈಗ ತನಿಖೆ ಆಗಬೇಕು ಅಂತಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಸ್ಪಂದಿಸುತ್ತಿಲ್ಲ” ಎಂದು ದೂರಿದರು.

”ಈಗಾಗಲೇ ಹಲವು ಗುತ್ತಿಗೆದಾರರು ದಯಾಮರಣ ಕೋರಿದ್ದಾರೆ. ಮಂಗಳೂರಿನಲ್ಲಿ ಒಬ್ಬ ಗುತ್ತಿಗೆದಾರ, ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಾಲಿಕೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿದೆ” ಎಂದರು.

ಅಹವಾಲು ಆಲಿಸಿದ ಹೆಚ್.ಡಿ. ಕುಮಾರಸ್ವಾಮಿ, ”ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ನಿಮ್ಮ ಬಾಕಿ ಹಣ ತಡೆ ಹಿಡಿಯುವುದು ಸರಿಯಲ್ಲ. ಹಣ ಬಿಡುಗಡೆ ಮಾಡದಿದ್ದರೆ ನಿಮ್ಮ ಜೊತೆ ನಾನು ಧರಣಿ ಕೂರುತ್ತೇನೆ. ನೀವ್ಯಾರೂ ಹೆದರಬೇಕಾಗಿಲ್ಲ” ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಗುತ್ತಿಗೆದಾರರು ನೀಡಿದ ಎಲ್ಲ ದಾಖಲೆಗಳನ್ನು ಪರಿಶೀಲಿಸಿ, ದುಡಕಬೇಡಿ, ನಿಮ್ಮ ಪರ ನಾನು ನಿಲ್ಲುತ್ತೇನೆ ಎಂದು ಧೈರ್ಯ ತುಂಬಿದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ