Breaking News

ಬೆನ್ನುಮೂಳೆಗೆ ಪೆಟ್ಟುಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ ಅವರನ್ನು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

Spread the love

ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

“ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು ಸಚಿವರು ಹಾರೈಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀವು ಬೇಗ ಗುಣಮುಖರಾಗಿ ವೃಕ್ಷ ಪ್ರೇಮಿಗಳಿಗೆ ಮಾರ್ಗದರ್ಶನ ಮಾಡಬೇಕು, ಪ್ರೇರಣೆ ನೀಡಬೇಕು ಎಂದಿರುವುದಾಗಿ ಇದೇ ಸಂದರ್ಭದಲ್ಲಿ ತಿಮ್ಮಕ್ಕ ಅವರಿಗೆ ಸಚಿವರು ತಿಳಿಸಿದರು. ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ತಿಮ್ಮಕ್ಕರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಖಂಡ್ರೆ, ಹೆಚ್ಚಿನ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.

ಸಾಲುಮರದ ತಿಮ್ಮಕ್ಕ ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಂಆರ್‌ಐ ಸ್ಕ್ಯಾನಿಂಗ್ ಮಾಡಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ