Breaking News

ಅನಾರೋಗ್ಯದ ಕಾರಣದಿಂದ ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ;H.D.D.

Spread the love

ಬೆಂಗಳೂರು : ಅನಾರೋಗ್ಯದ ಕಾರಣದಿಂದ ಇಂದು ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಇಂದು ರಾತ್ರಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿರುವ ಅವರು, ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆಯನ್ನು ಇಂದೇ ಆಯೋಜಿಸಲಾಗಿತ್ತು. ಸೊಂಟ ನೋವಿನ ಕಾರಣ ಆ ಸಭೆಯಲ್ಲೂ ಬಹಳ ಹೊತ್ತು ಕೂರಲು ತಮ್ಮಿಂದ ಆಗಲಿಲ್ಲ. ಹತ್ತು ನಿಮಿಷವಷ್ಟೇ ಸಭೆಗೆ ಹಾಜರಾಗಿ ನಂತರ ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿ ವಿಶ್ರಾಂತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ನೋವು ಕಡಿಮೆಯಾದರೆ ಬುಧವಾರ ಕಲಾಪದಲ್ಲಿ ಭಾಗಿಯಾಗುವುದಾಗಿ ದೇವೇಗೌಡರು ತಿಳಿಸಿದ್ದಾರೆ.

ಮನೆಯಲ್ಲಿಯೇ ಕಲಾಪ ವೀಕ್ಷಣೆ: ಇದರ ನಡುವೆ ಮಾಜಿ ಪ್ರಧಾನಿಗಳು ಮನೆಯಲ್ಲಿಯೇ ಟಿವಿಯಲ್ಲಿ ರಾಜ್ಯಸಭೆ ಕಲಾಪದ ನೇರ ಪ್ರಸಾರ ವೀಕ್ಷಿಸಿದರು. ಸಂಸತ್ತಿನ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಉಭಯ ಸದನಗಳ ಕಲಾಪ ದೆಹಲಿ ಸೇವೆಗಳ ಮಸೂದೆ ಹಾಗು ಮಣಿಪುರ ಹಿಂಸಾಚಾರ ಹಿನ್ನೆಲೆಯಲ್ಲಿ ವ್ಯರ್ಥವಾಗುತ್ತಿದೆ.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ