Breaking News

ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರೊಂದಿಗೆ ಮಾತುಕತೆ

Spread the love

ಬೆಂಗಳೂರು: ಆರು ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಇಂದು ಸರಣಿ ಸಭೆ ನಡೆಸಿದರು. ಸಭೆಯಲ್ಲಿ ಬಹುತೇಕ ಶಾಸಕರು ಅನುದಾನ ಬಿಡುಗಡೆ ಬಗ್ಗೆ ಅಳಲು ತೋಡಿಕೊಂಡರು.

ಬೆಳಗ್ಗೆ ರಾಯಚೂರು, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರ ಜೊತೆ ಸಿಎಂ ಮಾತನಾಡಿದರು. ಸಂಜೆ ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಅಸಮಾಧಾನಕ್ಕೆ ಮದ್ದು ಅರೆಯುವ ಕಸರತ್ತು ನಡೆಸಿದರು.

ಆರು ಜಿಲ್ಲೆಯ ಸಚಿವರು ಮತ್ತು ಶಾಸಕರುಗಳು ಆಯಾ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಸಚಿವರ ಜೊತೆ ಸಮನ್ವಯತೆ, ಪಂಚ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಸಂಬಂಧ ಸುದೀರ್ಘವಾಗಿ ಚರ್ಚಿಸಿದ್ದಾರೆ.

‘ಲೋಕಸಭೆ ಚುನಾವಣೆಗೆ ಎದುರಿಸುವುದು ಹೇಗೆ?’: ಸಭೆಯಲ್ಲಿ ಸಿಎಂ ಬಳಿ ಹೆಚ್ಚು ಶಾಸಕರು ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡದೇ ಲೋಕಸಭೆ ಚುನಾವಣೆಗೆ ಹೋಗೋದು ಹೇಗೆ ಎಂಬ ಆತಂಕ, ದುಗುಡವನ್ನು ಮುಖ್ಯಮಂತ್ರಿ ಮುಂದಿಟ್ಟಿದ್ದಾರೆ. ಗ್ಯಾರಂಟಿ ಸ್ಕೀಂ ಒಂದೆಡೆಯಾದ್ರೆ, ಕ್ಷೇತ್ರಕ್ಕೆ ಏನು ಕೊಟ್ಟಿದ್ದೀರಿ ಎಂದು ಜನ ಕೇಳ್ತಾರೆ. ಅದಕ್ಕೆ ಹೇಗೆ ಉತ್ತರಿಸುವುದು?. ಹೀಗಾಗಿ ವಿಶೇಷ ಅನುದಾನ ಕೊಡಬೇಕೆಂದು ಶಾಸಕರು ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಜನರ ಬಳಿ ಹೋದಾಗ ಇಷ್ಟು ಅನುದಾನ ತಂದು, ಕಾಮಗಾರಿ ಮಾಡಿಸುತ್ತಿದ್ದೇವೆ ಎಂದು ಹೇಳಬೇಕಾಗುತ್ತದೆ. ಅನುದಾನವೇ ಕೊಡದಿದ್ದರೆ ಮತ ಕೇಳೋದು ಕಷ್ಟವಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ