Breaking News

ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್‌ ಬಳಿ ₹10 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!

Spread the love

ಭೋಪಾಲ್ (ಮಧ್ಯಪ್ರದೇಶ): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದರು.

ರಾಜ್‌ಗಢದ ಜಿಲ್ಲಾ ಆಸ್ಪತ್ರೆಯ ಸ್ಟೋರ್ ಕೀಪರ್ ಆಗಿ ನಿವೃತ್ತಗೊಂಡಿರುವ ಲಾಟೇರಿ ನಿವಾಸಿ ಅಶ್ಫಾಕ್ ಅಲಿ, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಭ್ರಷ್ಟಾಚಾರ ಕಾಯ್ದೆಯಡಿ ಪೊಲೀಸರು ದೂರಿಗೆ ದೂರು ಬಂದಿದ್ದು, ತನಿಖೆ ಕೈಗೊಂಡಿದ್ದಾರೆ. ಈ ವೇಳೆ, ಭಾರಿ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯದ 10 ಕೋಟಿ ರೂ. ಇರಬಹುದು ಎಂದು ಲೋಕಾಯುಕ್ತ ಅಧಿಕಾರಿಗಳು ಅಂದಾಜಿಸಿದ್ದಾರೆ.

ಅಶ್ಫಾಕ್ ಅಲಿ ಕುಟುಂಬದ ಸದಸ್ಯರ ಹೆಸರಿನಲ್ಲಿ 16ಕ್ಕೂ ಹೆಚ್ಚು ಸ್ಥಿರಾಸ್ತಿಗಳು ಪತ್ತೆಯಾಗಿವೆ. ಭೋಪಾಲ್ ವಿದಿಶಾ ಮತ್ತು ಮೂಲ ಸ್ಥಳವಾದ ಲಾಟೇರಿಯಲ್ಲಿ 50ಕ್ಕೂ ಹೆಚ್ಚು ಸ್ಥಿರಾಸ್ತಿಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿಯ ಪುತ್ರಿ ಹೀನಾ ಕೌಸರ್ ಮತ್ತು ಪತ್ನಿ ರಶೀದಾ ಬೀ ಹೆಸರಿನಲ್ಲಿ ಅಪಾರ ಆಸ್ತಿಗಳು ಖರೀದಿ ಮಾಡಲಾಗಿದೆ. ಇವರುಗಳ ಹೆಸರಿನಲ್ಲೇ ಕೋಟಂತರ ಮೌಲ್ಯದ 16 ಸ್ಥಿರಾಸ್ತಿಗಳಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ