Breaking News

ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್​ನಲ್ಲಿ ಮಗಳು ಅಧ್ಯಕ್ಷರಾಗಿ ಆಯ್ಕೆಯಾದರೆ, ತಾಯಿ ಉಪಾಧ್ಯಕ್ಷರಾಗಿ ಆಯ್ಕೆ

Spread the love

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆದ್ದು ಅಮ್ಮ, ಮಗಳು ಇಬ್ಬರು ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನ ಅಲಂಕರಿಸಿ ಗಮನ ಸೆಳೆದಿದ್ದಾರೆ. ಅಧ್ಯಕ್ಷೆಯಾಗಿ ಮಗಳು ಸ್ನೇಹ ಆಯ್ಕೆಯಾದರೆ, ತಾಯಿ ನೇತ್ರಾವತಿ ಉಪಾಧ್ಯಕ್ಷೆಯಾದರು.

ಗರ್ಜೆ ಹಾಗೂ ಜಿ.ಮಾದಾಪುರ ಗ್ರಾಮಗಳನ್ನು ಸೇರಿಸಿ ಒಂದು ಪಂಚಾಯತ್​ ಮಾಡಲಾಗಿದೆ. ಎರಡು ಗ್ರಾಮಗಳಿಂದ ಒಟ್ಟು 7 ಜನ ಗ್ರಾ.ಪಂ ಸದಸ್ಯರಿದ್ದಾರೆ. ಕಳೆದ ಅವಧಿಗೆ ಬೇರೆಯವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿತ್ತು.

ಏಳು ಜನ ಸದಸ್ಯರಲ್ಲಿ 3 ಜನರು ಒಂದು ಗುಂಪಿನಲ್ಲಿ ಗುರುತಿಸಿಕೊಂಡರೆ, 4 ಜನರು ಮತ್ತೊಂದು ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಇದರ ಮಧ್ಯೆಯೂ ತಾಯಿ ಮತ್ತು ಮಗಳಿಗೆ ಗ್ರಾಮ ಪಂಚಾಯತ್​ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಒಲಿದಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಸಿಕ್ಕಿರುವುದಕ್ಕೆ ತಾಯಿ-ಮಗಳು ಇಬ್ಬರೂ ಹರ್ಷ ವ್ಯಕ್ತಪಡಿಸಿದರು.

ಉಪಾಧ್ಯಕ್ಷೆ ನೇತ್ರಾವತಿ ಪ್ರತಿಕ್ರಿಯಿಸಿ, “ಪಂಚಾಯತ್​ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಅದೃಷ್ಟದಿಂದ ಗೆದ್ದೆವು. ಆದರೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುತ್ತೇವೆ ಎನ್ನುವುದನ್ನು ಕನಸಲ್ಲೂ ಅಂದುಕೊಂಡಿರಲಿಲ್ಲ. ಜನರ ನಂಬಿಕೆ ಉಳಿಸಿಕೊಳ್ಳುತ್ತೇವೆ” ಎಂದು ಹೇಳಿದರು.ಪದವಿ ಓದಿರುವ ಸ್ನೇಹ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸಿರಲಿಲ್ಲ. ಜಿ.ಮಾದಾಪುರ ಹಾಗೂ ಗರ್ಜೆ ಎರಡೂ ಗ್ರಾಮದಲ್ಲೂ ನೇತ್ರಾವತಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬೆಂಬಲಿಗರು ತೀರ್ಮಾನಿಸಿದ್ದರು. ಆದರೆ ಎರಡೂ ಕಡೆಯಲ್ಲೂ ಗೆದ್ದರೆ ಮತ್ತೆ ಉಪಚುನಾವಣೆ ನಡೆಯುತ್ತದೆ ಎಂದು ನಾಮಪತ್ರ ಸಲ್ಲಿಕೆಯ ಕಡೇ ದಿನದ ಸ್ನೇಹ, ತಂದೆಯ ಗೆಳೆಯರ ಒತ್ತಾಯದ ಮೇರೆಗೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಗೆದ್ದಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ