Breaking News

ಕ್ವಿಟ್ ಇಂಡಿಯಾ ದಿನಾಚರಣೆ.. ರ‍್ಯಾಲಿ ನಡೆಸದಂತೆ ಮುಂಬೈನಲ್ಲಿ ಗಾಂಧೀಜಿ ಮರಿ ಮೊಮ್ಮಗ ತುಷಾರ್​ ಗಾಂಧಿ ಬಂಧನ, ಬಿಡುಗಡೆ

Spread the love

ಮುಂಬೈ (ಮಹಾರಾಷ್ಟ್ರ) : ಕ್ವಿಟ್​ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್​ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್​ ಗಾಂಧಿ ಆರೋಪಿಸಿದ್ದಾರೆ.

 

ಇಲ್ಲಿನ ಆಗಸ್ಟ್​ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್​ ಸಾಂತಾ ಕ್ರೂಝ್​ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅಲ್ಲದೆ ಕಾರ್ಯಕ್ರಮಕ್ಕೆ ಹೋಗದಂತೆ ತಡೆದಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ತುಷಾರ್​ ಗಾಂಧಿ, ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ನಾನು ಕ್ವಿಟ್ ಇಂಡಿಯಾ ದಿನದ ಕಾರ್ಯಕ್ರಮಕ್ಕೆ ಮನೆಯಿಂದ ಹೊರಟಾಗ ಸಾಂತಾ ಕ್ರೂಜ್ ಠಾಣೆಯ ಪೊಲೀಸರು ನನ್ನನ್ನು ಬಂಧಿಸಿದ್ದಾರೆ. ಈ ಹಿಂದೆ ಐತಿಹಾಸಿಕ ದಿನದಂದು ನನ್ನ ಮುತ್ತಾತ ಬಾಪು ಅವರನ್ನು ಬ್ರಿಟಿಷ್ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಮನೆಯಿಂದ ಹೊರಟ ತಮ್ಮನ್ನು ಆಗಸ್ಟ್ ಕ್ರಾಂತಿ ಮೈದಾನಕ್ಕೆ ತೆರಳದಂತೆ ಪೊಲೀಸರು ತಡೆದಿದ್ದಾರೆ. ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ಜಿ ಜಿ ಪರೀಖ್​ ಅವರನ್ನು ಪೊಲೀಸರು ತಡೆದಿದ್ದಾರೆ ಎಂದು ಹೇಳಿದ್ದಾರೆ. ತುಷಾರ್​ ಗಾಂಧಿ, ತೀಸ್ತಾ ಸೆಟಲ್ವಾಡ್​ ಮತ್ತು ಪರೀಖ್​ ಅವರು ಕ್ವಿಟ್​ ಇಂಡಿಯಾ ಚಳವಳಿ ನೆನಪಿನ ಸಂಬಂಧ ಇಲ್ಲಿನ ಗಿರ್​ಗಾಂವ್​ ಚೌಪಟ್ಟಿಯಿಂದ ಆಗಸ್ಟ್​​ ಕ್ರಾಂತಿ ಮೈದಾನಕ್ಕೆ ಹಮ್ಮಿಕೊಂಡಿದ್ದ ಶಾಂತಿ ರ‍್ಯಾಲಿಯಲ್ಲಿ ಭಾಗವಹಿಸಬೇಕಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಆಗಸ್ಟ್​ ಕ್ರಾಂತಿ ಮೈದಾನಕ್ಕೆ ಹಮ್ಮಿಕೊಂಡಿದ್ದ ರ‍್ಯಾಲಿಗೆ ಅವಕಾಶ ನಿರಾಕರಿಸಿರುವುದರಿಂದ ತುಷಾರ್​ ಗಾಂಧಿ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಹೇಳಲಾಗಿದೆ. ಬಳಿಕ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸೆಟಲ್ವಾಡ್ ಅವರು ಆಗಸ್ಟ್​ ಕ್ರಾಂತಿ ಮೈದಾನಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಪರೀಖ್​ ಅವರು ಗಿರ್ ಗಾಂವ್ ನಲ್ಲಿರುವ ಲೋಕಮಾನ್ಯ ತಿಲಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ನಿರ್ಗಮಿಸಿದರು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ