Breaking News

ರಾಜ್ಯ ಸರ್ಕಾರದಿಂದ ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ

Spread the love

ಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.

ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

 ಅಧಿಸೂಚನೆಹುದ್ದೆ ವಿವರ: ಮೂರು ವಾಹಕನ ಚಾಲಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳ 500 ರೂ. ಅರ್ಜಿ ಶುಲ್ಕವನ್ನು ಭರಿಸಬೇಕು.

ವೇತನ: ಈ ಹುದ್ದೆಗೆ ಮಾಸಿಕ 21,400 ರೂ ನಿಂದ 42,000 ರೂ.ವರೆಗೆ ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಈ ಕೆಳಗಿನ ವಿಳಾಸಕ್ಕೆ ನಿಗದಿ ದಿನಕ್ಕೂ ಮುನ್ನವೇ ಸಲ್ಲಿಸಬೇಕು

ಅರ್ಜಿ ಸಲ್ಲಿಕೆ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5047, ಮೊದಲನೆ ಮಹಡಿ, ವಿಧಾನ ಸೌಧ, ಬೆಂಗಳೂರು- 560001

ಈ ಹುದ್ದೆಗೆ ಈಗಾಗಲೇ ಸರ್ಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಕೆ ಆಗಸ್ಟ್​ 5 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 8 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು kla.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ