Breaking News

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು.

ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ, ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು. ಅಧಿಕಾರಿಗಳು, ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾರೆ. ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಅಥವಾ ಧರ್ಮ ಕಲಹಗಳಲ್ಲಿ ತೊಡಗಿಕೊಳ್ಳಬಾರದು. ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ದೇಶವನ್ನು ರಕ್ಷಿಸುತ್ತದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಈ ಸಮಾನತೆ ಇಲ್ಲ. ಹೀಗೆ ಮುಂದುವರೆದರೆ, ಅಸಮಾನತೆಗೆ ಒಳಗಾದ ಜನರು ಸ್ವಾತಂತ್ರ್ಯ ಸೌಧವನ್ನು ಧ್ವಂಸಗೊಳಿಸುವ ಸಾಧ್ಯತೆ ಇದೆ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಇದು ಎಲ್ಲ ನಾಗರಿಕರ ಕರ್ತವ್ಯ. ಅರ್ಥಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಸುಧಾರಣೆ ತರಬಹುದಾಗಿದೆ. ಈಗ ಶಿಕ್ಷಣ ಅಭಿವೃದ್ಧಿಗೊಳ್ಳುತ್ತಿದೆ. ವಿದ್ಯಾವಂತರು ಜಾತ್ಯತೀತೆ, ವೈಚಾರಿಕತೆಯನ್ನು ಪಾಲಿಸಬೇಕು ಎಂದರು.

ಸಾಮಾಜಿಕ ಸುಧಾರಣೆ : ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಈಗಾಗಲೇ 3 ಗ್ಯಾರಂಟಿ ಜಾರಿಯಾಗಿವೆ. ಆಗಸ್ಟ್ 24ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ. ಸ್ವಾತಂತ್ರ್ಯ ಭಾರತದ ಫಲವನ್ನು ಜನರಿಗೆ ತಲುಪಿಸುವ ಮೂಲಕ ಸಾಮಾಜಿಕ ಸುಧಾರಣೆಯನ್ನು ತರಬಹುದಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ