Breaking News

ಸಿಎಂ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

Spread the love

ಚಿಕ್ಕೋಡಿ : ನಾಳೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವರು ಆಗಮಿಸಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು.

 

ಬೆಳಗಾವಿ ಜಿಲ್ಲೆಯ ಕೋಕಟನೂರ ಗ್ರಾಮದಲ್ಲಿಂದು ಕಾರ್ಯಕ್ರಮದ ರೂಪುರೇಷೆ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 11ರಂದು 10:30ಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಆಗಮಿಸುತ್ತಿದ್ದಾರೆ ಎಂದರು.

ಕೋಕಟನೂರ ಗ್ರಾಮದಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆ ಹಾಗೂ ನೂತನವಾಗಿ ನಿರ್ಮಾಣವಾಗುತ್ತಿರುವ ಆರ್.ಟಿ.ಒ ಕಚೇರಿ, ಕೆಎಸ್‌ಆರ್‌ಟಿಸಿ ಡಿಪೊ, ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್, (ಕೊಕಟನೂರ), ಸತ್ತಿ ಮತ್ತು ಇತರ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ ಅಡಿಗಲ್ಲು, ಚಿಕ್ಕೋಡಿ ಮತ್ತು ಇತರ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು, ಅಥಣಿ ಪಟ್ಟಣದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮೂರ್ತಿ ಅನಾವರಣ, ಶ್ರೀ ಸಿದ್ದರಾಮೇಶ್ವರ ನೀರಾವರಿ ಯೋಜನೆ (ವಡ್ಡರ ಸಮಾಜ) ಉದ್ಘಾಟನೆ, ತೆಲಸಂಗದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಉದ್ಘಾಟನೆ, ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ-ಅಥಣಿ ನಗರ ಕಟ್ಟಡ ಉದ್ಘಾಟನೆ, ಸಹಕಾರಿ ಪಶು ಗೋ ಶಾಲೆ ಉದ್ಘಾಟನೆ ಸೇರಿದಂತೆ ಹಲವು ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ