ಹಾವೇರಿ: ಡಾಂಬರ್ ಹಾಕಿ 7 ತಿಂಗಳಲ್ಲಿ ಕೆಟ್ಟು ನಿಂತ ಬೈ ಪಾಸ್ ರಸ್ತೆ.

Spread the love

ಹಾವೇರಿ: ಜಿಲ್ಲಾಕೇಂದ್ರ ಹಾವೇರಿ ನಗರದ ಪಕ್ಕದಲ್ಲಿಯೇ ರಾಷ್ಟ್ರೀಯ ಹೆದ್ದಾರಿ 48 ಹಾಯ್ದು ಹೋಗಿದೆ. ರಾಷ್ಟ್ರೀಯ ಹೆದ್ದಾರಿ 48 ರಿಂದ ನಗರ ಸಂಪರ್ಕಿಸಲು ನಾಲ್ಕು ಕಡೆ ಬೈ ಪಾಸ್ ರಸ್ತೆಗಳನ್ನು ಕೂಡ ನಿರ್ಮಿಸಲಾಗಿದೆ. ಅವುಗಳಲ್ಲಿ ತೋಟದಯಲ್ಲಾಪುರ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ ರಸ್ತೆಗಳು ಪ್ರಮುಖವಾದದು.

ಬೆಂಗಳೂರು ಕಡೆಯಿಂದ ಬರುವ ವಾಹನಗಳು ತೋಟದಯಲ್ಲಾಪುರ ಬೈಪಾಸ್‌ ಮೂಲಕ ಹಾವೇರಿ ಸಂಪರ್ಕಿಸುತ್ತವೆ. ಇನ್ನು ಹುಬ್ಬಳ್ಳಿ ಕಡೆಯಿಂದ ಬರುವ ವಾಹನಗಳು ಆರ್‌ಟಿಒ ಕಚೇರಿಯ ಬೈಪಾಸ್‌ ಮೂಲಕ ನಗರ ಸಂಪರ್ಕಿಸುತ್ತವೆ. ಆದರೆ, ಈ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹಾಳಾಗಿದ್ದರಿಂದ ಇಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿದ್ದವು. ದ್ವಿಚಕ್ರವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಕೈಕಾಲು ಮುರಿದುಕೊಂಡಿದ್ದರು.

ಜನವರಿ ತಿಂಗಳಲ್ಲಿ ಹಾವೇರಿಯಲ್ಲಿ ನಡೆದ ಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನದ ವೇಳೆ ಈ ರಸ್ತೆಗಳನ್ನು ದುರಸ್ತಿ ಮಾಡಲಾಗಿತ್ತು. ಇದರಿಂದ ಮತ್ತೆ ಈ ರಸ್ತೆಗಳಿಗೆ ಡಾಂಬರ್ ಹಾಕಲಾಗಿತ್ತು. ಆದರೆ, ಏಳೇ ತಿಂಗಳಾಗುವಷ್ಟರಲ್ಲಿ ರಸ್ತೆಗಳು ವಾಪಾಸ್​ ಹಾಳಾಗಿವೆ.

ಸರ್ವಿಸ್ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ತಗ್ಗುಗುಂಡಿಗಳು ಬಿದ್ದಿದ್ದು ಮಳೆಗಾಲದಲ್ಲಿ ಈ ರಸ್ತೆಗಳಲ್ಲಿ ಸಂಚರಿಸುವುದು ದುಸ್ತರವಾಗಿದೆ. ದ್ವಿಚಕ್ರವಾಹನ ಸವಾರರು ಗುಂಡಿಗಳನ್ನು ತಪ್ಪಿಸಿ ಬೈಕ್ ಓಡಿಸಲು ಸರ್ಕಸ್ ಮಾಡಬೇಕಾಗುತ್ತದೆ. ಇನ್ನು ದೊಡ್ಡ ದೊಡ್ಡ ವಾಹನಗಳ ಪರಿಸ್ಥಿತಿ ಹೇಳತಿರದು. ಅಧಿಕ ಭಾರದ ವಾಹನಗಳು ಹರಸಾಹಸವನ್ನೇ ಮಾಡಬೇಕಿದೆ.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ