Breaking News

ಗುತ್ತಿಗೆದಾರರಿಗೆ ಬಿಲ್ ಕೊಡುವುದು ಬೇಡ ಅನ್ನೋದಿಲ್ಲ. ತನಿಖೆಯಲ್ಲಿ ತಪ್ಪು ಮಾಡಿಲ್ಲ ಅನ್ನೋದು ಸಾಬೀತಾದರೆ ಬಿಲ್​ ಖಂಡಿತ ಕೊಡುತ್ತೇವೆ ಎಂದ ಸಿಎಂ‌

Spread the love

ಬೆಳಗಾವಿ: ಈ ರಾಜ್ಯವನ್ನು ಬಿಜೆಪಿಗರು ಹಾಳು ಮಾಡಿದ್ದಾರೆ. ಆರ್ಥಿಕವಾಗಿ, ಭ್ರಷ್ಟಾಚಾರ, ಧರ್ಮ ರಾಜಕಾರಣ ಮಾಡಿದ್ದಾರೆ. ನಾವು 135 ಸ್ಥಾನ ಗೆದ್ದಿದ್ದರಿಂದ ಬಿಜೆಪಿಗರಿಗೆ ಭಯ ಆರಂಭವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ, ಗೆಲ್ಲಲಿಲ್ಲ ಎಂದು ಹತಾಶರಾಗಿದ್ದಾರೆ. ಲೋಕಸಭೆಯಲ್ಲಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಿನ್ ಲಾಡನ್ ಸರ್ಕಾರ ಎಂಬ ಆರ್.ಅಶೋಕ್​ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಲೋಕಸಭೆ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಅವರಿಗೆ ಶುರುವಾಗಿದೆ. ನಾವು ಗ್ಯಾರಂಟಿಗಳನ್ನು ಜಾರಿಗೆ ತಂದ ಬಳಿಕ ಹತಾಶರಾಗಿ ಬಾಯಿಗೆ ಬಂದ ಹಾಗೆ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕೆಂಪಣ್ಣ ಒತ್ತಾಯ ವಿಚಾರದ ಬಗ್ಗೆ ಮಾತನಾಡಿ, “ಹಣ ಬಾಕಿ ಉಳಿದಿರೋದು ಯಾರ ಕಾಲದಲ್ಲಿ ಆಗಿರೋ ಕೆಲಸ. ಹಿಂದಿನ ಬಿಜೆಪಿ ಸರ್ಕಾರ ಬಾಕಿ ಉಳಿಸಿ ಹೋಗಿದೆ. ಹಿಂದಿನ ಸರ್ಕಾರ ಎರಡು ವರ್ಷ, ಮೂರು ವರ್ಷ ಬಿಲ್ ಕೊಟ್ಟಿಲ್ಲ. ನಾವು ಬಂದು ಇನ್ನೂ ಮೂರು ತಿಂಗಳು ಕೂಡ ಆಗಿಲ್ಲ‌. ಅದರ ಮೇಲೂ ನಮಗೆ ಒತ್ತಡ ಹಾಕುತ್ತಿದ್ದಾರೆ” ಎಂದು ಗುಡುಗಿದರು.

ಅಲ್ಲದೇ, “ನಾವು ಶೇ 40ರಷ್ಟು ಕಮಿಷನ್ ದಂಧೆಯ ಬಗ್ಗೆ ಮಾತನಾಡಿದ್ದೆವು. ಈ ಬಗ್ಗೆ ತನಿಖೆ ಮಾಡಬೇಕು. ಗುಣಮಟ್ಟದ ಕೆಲಸ ಆಗಿದೆಯಾ ಇಲ್ವಾ ಎಂದು ತನಿಖೆ ನಡೆಸುತ್ತೇವೆ. ಗುತ್ತಿಗೆದಾರರಿಗೆ ಬಿಲ್ ಕೊಡುವುದು ಬೇಡ ಅನ್ನೋದಿಲ್ಲ. ಕಾಮಗಾರಿ ಕುರಿತು ತನಿಖೆ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ನಾಲ್ಕು ತಂಡ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದೇವೆ. ವರದಿ ಕೊಟ್ಟ ಬಳಿಕ‌ ತಪ್ಪು ಮಾಡಿಲ್ಲ ಅಂದ್ರೆ ಖಂಡಿತ ಬಿಲ್ ಕೊಡುತ್ತೇವೆ. ತಪ್ಪು ಮಾಡಿರುವುದು ಸಾಬೀತಾದರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದರು.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the loveಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ