Breaking News

ಮಾರ್ಗದರ್ಶಿ ಚಿಟ್ ಗ್ರೂಪ್​ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್​ ರಿಜಿಸ್ಟ್ರಾರ್​ ಹೊರಡಿಸಿದ್ದ ಸಾರ್ವಜನಿಕ ನೊಟೀಸ್​ಗೆ ಆಂಧ್ರ ಪ್ರದೇಶ ಹೈಕೋರ್ಟ್​ ತಡೆಯಾಜ್ಞೆ

Spread the love

ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್​ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್​ ರಿಜಿಸ್ಟ್ರಾರ್​ ಹೊರಡಿಸಿದ್ದ ಸಾರ್ವಜನಿಕ ನೊಟೀಸ್​ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು​ ತಡೆ ನೀಡಿತು.

ಸಾರ್ವಜನಿಕ ನೊಟೀಸ್​ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್​ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅರ್ಜಿಗಳನ್ನು ಜೊತೆಯಾಗಿಯೇ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿತು.

ಚಂದಾದಾರರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿ ಆಂಧ್ರಪ್ರದೇಶ ಸರ್ಕಾರದ ವೆಬ್​ಸೈಟ್​ನಲ್ಲಿ ಚಿಟ್​​​ ರಿಜಿಸ್ಟ್ರಾರ್ ​ಸಾರ್ವಜನಿಕ ನೊಟೀಸ್​ ಪ್ರಕಟಿಸಿದ್ದರು. ಪ್ರಶ್ನಿಸಿ ಮಾರ್ಗದರ್ಶಿ ಚಿಟ್​ಫಂಡ್​ ಕಂಪನಿಯು ಆಂಧ್ರಪ್ರದೇಶದ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯವು ಮಾರ್ಗದರ್ಶಿ ಚಿಟ್​ಫಂಡ್​ ಗ್ರೂಪ್​ ಹಾಗೂ ಸರ್ಕಾರದ ಪರವಾದ ಎರಡೂ ಕಡೆಗಳ ವಾದಗಳನ್ನು ಆಲಿಸಿ ತಡೆಯಾಜ್ಞೆ ನೀಡಿದೆ.

ಈ ಹಿಂದೆ ಚಂದಾದಾರರು ಸಲ್ಲಿಸಿರುವ ಅರ್ಜಿಗಳ ಕುರಿತು ತಡೆ ನೀಡಲಾಗಿದೆ. ಚಂದಾದಾರರ ಅರ್ಜಿಗಳು ಹಾಗೂ ಮಾರ್ಗದರ್ಶಿ ಗ್ರೂಪ್​ನ ಅರ್ಜಿಗಳ ನಡುವೆ ಪರಸ್ಪರ ಸಂಬಂಧವಿದೆ. ಹೀಗಾಗಿ ಎರಡನ್ನೂ ಏಕಕಾಲಕ್ಕೆ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೈಕೋರ್ಟ್​ ಸ್ಪಷ್ಟಪಡಿಸಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ