Breaking News

ಬಿಬಿಎಂಪಿ ಅಗ್ನಿ ದುರಂತ.. ಇಬ್ಬರು ಸಿಬ್ಬಂದಿ ವಿಚಾರಣೆ: ಡಿಸಿಪಿ ಶ್ರೀನಿವಾಸ್ ಗೌಡ

Spread the love

ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬಿಟುಮಿನ್​ ಏಕಾಗ್ರತೆ ಹಾಗೂ ಶಕ್ತಿಯ ಮಟ್ಟವನ್ನ ಪರೀಕ್ಷಿಸುವಾಗ ಬೆಂಜಿನ್ ಬಳಕೆ ಮಾಡುತ್ತಾರೆ. ಆ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ಅವಘಡಕ್ಕೆ ಕಾರಣವಾಗಿರಬಹುದು ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡ ಸಹ ಪರಿಶೀಲನೆ ನಡೆಸಿದೆ. ವರದಿ ಬಂದ ನಂತರ ನಿಖರವಾದ ಕಾರಣ ತಿಳಿದು ಬರಲಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಘಟನೆಯಲ್ಲಿ ಕೆಲವರಿಗೆ ಸುಮಾರು ಶೇ.25 ರಿಂದ 30ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಹೇಳಿಕೆಗಳನ್ನ ಪಡೆಯಲಾಗಿದೆ. ಲ್ಯಾಬ್ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯತನದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರೀಕ್ಷೆಗೆ ಅನುಮತಿ ಇತ್ತಾ?, ಪ್ರಮಾಣಿತ ಕಾರ್ಯಾಚರಣೆಯ ವಿಧಾನ ಹಾಗೂ ನಿಯಮಗಳನ್ನ ಅನುಸರಿಸಲಾಗಿತ್ತಾ? ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ