ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಗೌರಿ ಖಾನ್ ಪುತ್ರಿ ಸುಹಾನಾ ಖಾನ್ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು.
ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ ದೃಶ್ಯಕ್ಕೆ ಎಲ್ಲೆಡೆ ಮೆಚ್ಚುಗೆ ಮತ್ತು ಪ್ರಶಂಸೆ ಸಿಕ್ಕಿದೆ.