Breaking News

ಹೆರಿಗೆಗೆಂದು ತವರಿಗೆ ಬಂದ ಗರ್ಭಿಣಿ ಸಹೋದರಿ ಮೇಲೆ ಆಕೆಯ ಇಬ್ಬರು ಸಹೋದರರ ಅತ್ಯಾಚಾರ

Spread the love

(ಮಹಾರಾಷ್ಟ್ರ): ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಅತ್ಯಂತ ನೀಚ ಹಾಗೂ ಹೀನ ಕೃತ್ಯವೊಂದು ವರದಿಯಾಗಿದೆ.

ಹೆರಿಗೆಗೆಂದು ತವರಿಗೆ ಬಂದ ಏಳು ತಿಂಗಳ ಗರ್ಭಿಣಿ ಸಹೋದರಿ ಮೇಲೆ ಆಕೆಯ ಇಬ್ಬರು ಸಹೋದರರು ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇಲ್ಲಿನ ಗಡ್ಚಿರೋಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂತ್ರಸ್ತೆ ಕೆಲವು ದಿನಗಳ ಹಿಂದೆ ಹೆರಿಗೆಗಾಗಿ ತನ್ನ ಪೋಷಕರ ಮನೆಗೆ ಬಂದಿದ್ದಳು. ಆಗಸ್ಟ್ 10ರಂದು ಮಹಿಳೆಯ ಪೋಷಕರು ಕೃಷಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಆಕೆಯ ಸಹೋದರರು ಮನೆಗೆ ಬಂದಿದ್ದರು. ಈ ಸಮಯದಲ್ಲಿ ಸಹೋದರಿ ಒಬ್ಬಳೇ ಇರುವುದನ್ನು ಕಂಡ ಈ ದುರುಳರು ಆಕೆಯ ಮೇಲೆ ಸರದಿಯಂತೆ ಅತ್ಯಾಚಾರ ಎಸಗಿದ್ದಾರೆ. ಪೋಷಕರು ಮನೆಗೆ ಹಿಂದಿರುಗಿದ ನಂತರ ಸಂತ್ರಸ್ತೆ ತನ್ನ ಸಹೋದರರು ಎಸಗಿದ ದುಷ್ಕೃತ್ಯದ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತೆಯೇ, ಪೋಷಕರು ಕುರ್ಖೇಡಾ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಸಹೋದರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯವು ಆದೇಶಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಮತ್ತೊಂದೆಡೆ, ಸಂತ್ರಸ್ತೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಈಕೆ ಮೇಲೆ ನಡೆದ ದುಷ್ಕೃತ್ಯದ ನಂತರ ಆರೋಗ್ಯ ಸ್ಥಿತಿ ಹದಗೆಡಲಾರಂಭಿಸಿದೆ. ಆದ್ದರಿಂದ ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಯ ಆರೋಗ್ಯ ಈಗ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ