ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ.
ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ.ಮಹದೇವಪ್ಪ ಹೇಳಿದರು.
ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆಯನ್ನು ಕಾನೂನು ಮಾಡುತ್ತದೆ ಎಂದರು.