Breaking News

ಶನಿವಾರ ಒಂದೇ ದಿನ ರಾಜ್ಯಾದ್ಯಂತ 31 ಅಪಘಾತದಲ್ಲಿ 38 ಮಂದಿ ಸಾವು

Spread the love

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ ‘ಕರಾಳ ಶನಿವಾರ’ ಎಂದಿದ್ದಾರೆ‌.

ಶನಿವಾರ ಒಂದೇ ದಿನ ರಾಜ್ಯದಲ್ಲಿ, ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣ ಸೇರಿದಂತೆ ಶನಿವಾರ ಒಂದೇ ದಿನ ರಾಜ್ಯಾದ್ಯಂತ ವಿವಿಧ ಅಪಘಾತಗಳಲ್ಲಿ ಒಟ್ಟು 38 ಜನ ಪ್ರಾಣ ಕಳೆದುಕೊಂಡಿರುವ ಕುರಿತು ಎಕ್ಸ್ ಆಯಪ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪಘಾತ ಪ್ರಕರಣಗಳಲ್ಲಿ ಹೆಚ್ಚು ದ್ವಿಚಕ್ರ ವಾಹನ ಸವಾರರೇ ಬಲಿಯಾಗುತ್ತಿದ್ದಾರೆ. ಆದ್ದರಿಂದ ಅವರ ಸುರಕ್ಷತೆಗಾಗಿ‌ ಹೆಲ್ಮೆಟ್ ಧರಿಸಬೇಕು. ಮತ್ತು ಅನುಭವವಲ್ಲದ ಚಾಲಕರು ರಾತ್ರಿ ಸಂಚಾರ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ದಂಡ ಪಾವತಿಸಿದರಷ್ಟೇ ಸಾಲದು, ಸಂಚಾರಿ ನಿಯಮ ಪಾಲಿಸಬೇಕು: ರಾಜ್ಯದಲ್ಲಿ ಶನಿವಾರ ಒಂದೇ ದಿನ 31 ಅಪಘಾತಗಳಲ್ಲಿ 38 ಜನ ಸಾವನ್ನಪ್ಪಿರುವುದು ವರದಿಯಾಗಿದೆ. ಆ ಪೈಕಿ ಚಿತ್ರದುರ್ಗದಲ್ಲಿ 7 ಜನ, ಪಾವಗಡ 2, ತುಮಕೂರು 6, ಚಿಕ್ಕಮಗಳೂರು 4, ಬೆಂಗಳೂರು 2, ಮಂಡ್ಯದಲ್ಲಿ 3 ಜನ ಸಾವನ್ನಪ್ಪಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್ “ಬಹಳಷ್ಟು ಪ್ರಕರಣಗಳಲ್ಲಿ ಚಾಲಕರಿಗೆ ನೈಪುಣ್ಯತೆ ಇರದಿರುವುದು ಅಪಘಾತಕ್ಕೆ ಕಾರಣವಾಗುತ್ತದೆ. ಇನ್ನೂ ಕೆಲವು ಪ್ರಕರಣಗಳಲ್ಲಿ ರಸ್ತೆ ಖಾಲಿಯಿದ್ದಾಗ ಅತಿ ವೇಗವಾಗಿ ಚಾಲನೆ ಮಾಡುವುದರಿಂದ ಅಪಘಾತವಾಗುತ್ತದೆ. ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣರಾಗುತ್ತಾರೆ. ಈ ಮೂರು ಕಾರಣಗಳಿಂದ ಹೆಚ್ಚು ಅಪಘಾತಗಳಾಗುತ್ತವೆ. ಮತ್ತು 60%ರಷ್ಟು ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ” ಎಂದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ