Home / ರಾಜಕೀಯ / ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: “ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ. ಅದಕ್ಕಿಂತಲೂ ಮೊದಲು 8 ಲಕ್ಷ ಮತದಾರರನ್ನು ಹೊಂದಿರುವ ಬೆಳಗಾವಿ ತಾಲೂಕು ರಚನೆಯಾಗಬೇಕಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಶೀಘ್ರವೇ ಹೊಸ ಬೆಳಗಾವಿ ತಾಲೂಕು ರಚನೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಯಾವುದಾದರೂ ಒಂದು ತಾಲೂಕು ಆಗಬಹುದು. ಯಾವ ರೀತಿ ತಾಲೂಕು ರಚಿಸಬೇಕೆಂದು ಅಧಿಕಾರಿಗಳು ನಿರ್ಧರಿಸುತ್ತಾರೆ” ಎಂದರು.

ಜಿಲ್ಲಾ ವಿಭಜನೆಯೂ ಆಗುತ್ತಾ ಎಂಬ ಪ್ರಶ್ನೆಗೆ, “ಗೋಕಾಕ್, ಚಿಕ್ಕೋಡಿ ಜಿಲ್ಲಾ ರಚನೆ ವಿಚಾರ ಮೊನ್ನೆ ಬೆಂಗಳೂರಿನಲ್ಲಿ ನಡೆದ ಬೆಳಗಾವಿ ಜಿಲ್ಲಾ ಶಾಸಕರ ಸಭೆಯಲ್ಲಿ ಚರ್ಚೆಯಾಗಿದೆ. ಜಿಲ್ಲಾ ರಚನೆ ಆಗಲೇಬೇಕೆಂದು ಒತ್ತಾಯಿಸಿದ್ದೇವೆ. ಆ ಬಗ್ಗೆ ಅಂತಿಮವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಿರುವ ಬೆಳಗಾವಿ ತಾಲೂಕನ್ನು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರ ಅಭಿಪ್ರಾಯ ಪಡೆದು ಹೊಸ ತಾಲೂಕು ರಚಿಸುತ್ತೇವೆ. ಎರಡೂ ತಾಲೂಕು ನಗರಕ್ಕೆ ಹೊಂದಿಕೊಂಡೇ ಇರಲಿವೆ” ಎಂದು ಹೇಳಿದರು.

ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ: ಬೆಳಗಾವಿ ನಗರಕ್ಕೆ ಬೇಕಾದ ಹೊಸ ಯೋಜನೆಗಳನ್ನು ಕಳೆದ ಮೂರು ತಿಂಗಳಲ್ಲಿ ಗುರುತಿಸಿಕೊಂಡಿದ್ದೆವು. ಅದೇ ರೀತಿ ನೀರಾವರಿ ಯೋಜನೆಗಳ ಅವಶ್ಯಕತೆಯೂ ಇದೆ. ಈ ಹಿಂದೆ ನಮ್ಮ ಸರ್ಕಾರದ, ಕೆರೆ ತುಂಬಿಸುವುದು ಮತ್ತು ಕೃಷಿ ಹೊಂಡಗಳ ನಿರ್ಮಾಣ ಯಶಸ್ವಿಯಾಗಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ ಅವು ಸ್ಥಗಿತಗೊಂಡಿದ್ದವು. ಪುನರ್‌ ಜಾರಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಕನಸಿನ ಯೋಜನೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೆಚ್ಚುವರಿ ಯೋಜನೆ ಕೊಟ್ಟಿದ್ದೇವೆ. ಆರು ತಿಂಗಳಲ್ಲಿ ಜನರ ಸೇವೆಗೆ ಮುಕ್ತವಾಗಲಿದೆ. ಭವಿಷ್ಯದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಆಗಬೇಕೆಂಬ ಬೇಡಿಕೆಯನ್ನೂ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಅಧಿಕಾರಿಗಳು ಮತ್ತು ಜನರ ಸಹಕಾರದಿಂದ ಒಳ್ಳೆಯ ಬೆಳಗಾವಿ ಮತ್ತು ಎರಡನೇ ರಾಜಧಾನಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ