Breaking News

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

Spread the love

ನವದೆಹಲಿ : ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ವರ್ಷದ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

ಜೊತೆಗೆ,” ವಾಜಪೇಯಿ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಲಾಭವಾಗಿದೆ, ಅವರ ನಾಯಕತ್ವದಲ್ಲಿ ದೇಶವು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು” ಎಂದು ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

 

ಈ ಕುರಿತು ಟ್ವೀಟ್​ ಮಾಡಿರುವ ಮೋದಿ, “ವಾಜಪೇಯಿ ಅವರ ನಾಯಕತ್ವದಿಂದ ದೇಶವು ಹೆಚ್ಚು ಪ್ರಯೋಜನ ಪಡೆದಿದೆ. ಅವರ ಪುಣ್ಯ ತಿಥಿಯಾದ ಇಂದು ಭಾರತ ದೇಶದ 140 ಕೋಟಿ ಜನರ ಪರವಾಗಿ ಧೀಮಂತ ನಾಯಕನಿಗೆ ಗೌರವ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.

ಗಣ್ಯರಿಂದ ಪುಷ್ಪ ನಮನ : ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ‘ಸದೈವ್ ಅಟಲ್’ ಸ್ಮಾರಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಸೇರಿದಂತೆ ಇತರೆ ಬಿಜೆಪಿ ನಾಯಕರು ಪುಷ್ಪ ನಮನ ಸಲ್ಲಿಸಿದರು.

 


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ