Breaking News

ರೈತರೊಂದಿಗೆ ಭತ್ತ ನಾಟಿ ಮಾಡಿದ ಐಎಎಸ್ ಅಧಿಕಾರಿ

Spread the love

ಗಂಗಾವತಿ (ಕೊಪ್ಪಳ) : ‘ರೈತರೊಂದಿಗೆ ಒಂದು ದಿನ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ರಾಹುಲ್​ ರತ್ನಂ ಪಾಂಡೆ ಅವರಿಂದು ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಾಲೂಕಿನ ಮರಳಿ ಹೋಬಳಿಯ ಕೋಟಯ್ಯ ಕ್ಯಾಂಪಿನಲ್ಲಿ ರೈತರೊಂದಿಗೆ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದರು.

ಈ ಸಂದರ್ಭದಲ್ಲಿ ಅವರು ಬಿಳಿ ಪಂಚೆ, ಟಿ ಶರ್ಟ್‌ ಧರಿಸಿದ್ದರು. ಬಳಿಕ ಹೊಲದಲ್ಲೇ ಕುಳಿತು ಮಧ್ಯಾಹ್ನದ ಭೋಜನ ಸವಿದರು.

 ಜನರೊಂದಿಗೆ ಮಧ್ಯಾಹ್ನದ ಭೋಜನ ಸವಿದ ಸಿಇಒರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

 ರೈತರೊಂದಿಗೆ ಭತ್ತ ನಾಟಿ ಮಾಡಿದ ಐಎಎಸ್ ಅಧಿಕಾರಿ


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ