Breaking News

ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಮಹದೇವ ನಗರ ನಿವಾಸಿಗಳಿಗೆ ಇಲ್ಲ ಮೂಲ ಸೌಕರ್ಯ

Spread the love

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಪೂರೈಸಿವೆ. ಆದರೆ, ನಂಜನಗೂಡು ತಾಲೂಕಿನ ಮಹದೇವ ನಗರದ ನಿವಾಸಿಗಳು ಇನ್ನೂ ಕೂಡ ಮೂಲ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದೆ. ಹೌದು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹದೇವ ನಗರ ಗ್ರಾಮದಲ್ಲಿ ನಿವಾಸಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.

ಮಾಜಿ ಸಚಿವ ದಿ. ಬೆಂಕಿ ಮಹದೇವು ಅವರು ಅಂದು ಆಶ್ರಯ ಯೋಜನೆಯಡಿ ಗುಂಪು ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದರು. ಆದರೆ, ಇನ್ನೂ ಅಭಿವೃದ್ಧಿ ಕಾಣದೇ ಅವರ ಕನಸು ಭಗ್ನಗೊಂಡಿದೆ. ಒಳ ಚರಂಡಿ, ರಸ್ತೆ, ಶುದ್ಧ ಕುಡಿವ ನೀರಿನ ಸೌಲಭ್ಯ, ವಿದ್ಯುತ್ ದೀಪ ಇಲ್ಲದೇ ಗ್ರಾಮಸ್ಥರು‌ ದಿನ ದೂಡುತ್ತಿದ್ದಾರೆ. ತೆಂಗಿನ ಗರಿಯ ಸೆಡ್ಡು ಹಾಗೂ ತಗಡಿನಲ್ಲೇ ಮನೆ ನಿರ್ಮಿಸಿ ಜನರು ವಾಸಿಸುತ್ತಿದ್ದಾರೆ. ಮಳೆ ಬಂದಾಗ ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.

“ನಮ್ಮನ್ನು ಬರಿ ವೋಟ್ ಬ್ಯಾಂಕ್​ಗಾಗಿ ಬಳಸಿಕೊಳ್ಳುತ್ತಾರೆ. ಸರ್ಕಾರದಿಂದ ಮನೆಗಳನ್ನು ಮಂಜೂರು ಮಾಡಿಲ್ಲ. ನಾವು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದೇವೆ. ನಮಗೆ ಮನೆ ನಿರ್ಮಿಸಿ ಕೊಡಿ” ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ರಾತ್ರಿ ಸಮಯದಲ್ಲಿ ವಿದ್ಯುತ್ ಇಲ್ಲ, ವಿದ್ಯಾರ್ಥಿಗಳಿಗೆ ಓದಿಕೊಳ್ಳಲು ತುಂಬಾ ತೊಂದರೆಯಾಗಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ನಲ್ಲಿಗಳನ್ನು ಹಾಕಲಾಗಿದೆ. ಆದರೆ, ಕಾಮಗಾರಿ ಮುಗಿದರೂ ಕುಡಿಯಲು ನೀರು ಬರುತ್ತಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ