Breaking News

ತಮಿಳುನಾಡು ರಾಜ್ಯ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನದಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದ ಮಾಜಿ ಸಿಎಂ

Spread the love

ಬೆಂಗಳೂರು: ”ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡದೇ, ತಮಿಳುನಾಡು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ” ಎಂದು ಸರ್ಕಾರದ ನಿಲುವಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

 

  •  

 

”ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಸಿಡಬ್ಲ್ಯೂಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಸರಿಯಲ್ಲ. ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ” ಎಂದು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

  •  

 

”ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿದೆ. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ. ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ. ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು” ಎಂದು ಆಗ್ರಹಿಸಿದ್ದಾರೆ.

 

  •  

Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ