Breaking News

ಸಮುದಾಯದ ಬಗ್ಗೆ ಕೀಳು ಮಾತು ಸಹಿಸಲ್ಲ, ಕಾನೂನು ಪ್ರಕಾರ ಕ್ರಮ- ಸಚಿವ ಜಿ.ಪರಮೇಶ್ವರ್

Spread the love

ಬೆಂಗಳೂರು: “ನಾಣ್ನುಡಿ ಇದೆ ಅಂತ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ.

ಆ ತರ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ. ಸಚಿವರೇ ಆಗಲಿ, ಯಾರೇ ಆಗಲಿ ಕಾನೂ‌ನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರ ವಿರುದ್ಧ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರೂ ಕೂಡಾ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಹೀಗೆ ಮಾತನಾಡೋರು ಅರ್ಥ ಮಾಡಿಕೊಳ್ಳಬೇಕು” ಎಂದರು.

“ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದನ್ನು ಯಾರೇ ಆದರೂ ನಿಲ್ಲಿಸಬೇಕು. ನಿಲ್ಲಿಸಿದರೆ ಒಳ್ಳೆಯದು. ನಾನೂ ಕೂಡಾ ಸಹಿಸುವುದಿಲ್ಲ. ಹೀಗೆ ಮಾತಾಡೋದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವೇ ಎಂದು ಪ್ರಶ್ನಿಸಿದರು. ಮಲ್ಲಿಕಾರ್ಜುನ ಏನ್ ಮಾತಾಡಿದ್ದಾರೆ ಗೊತ್ತಿಲ್ಲ. ಆದರೆ ಅದರ ಬಗ್ಗೆ ಪೇಪರ್​ನಲ್ಲಿ ಓದಿದ್ದೇನೆ. ರಾಜಾಜಿನಗರ ಕೇಸ್ ವಿಧಾನಸೌಧಕ್ಕೆ ವರ್ಗ ಆಗಿದೆ. ಸಾರ್ವಜನಿಕ ಜೀವನದಲ್ಲಿದ್ದು ಬೇರೆ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಹೀಗೆ ಮಾತಾಡಿದ್ರೆ ಅ ಸಮುದಾಯಕ್ಕೆ ನೋವಾಗಲ್ಲವೇ?. ಎರಡು ದೂರಿನ ಬಗ್ಗೆ ಸಿಎಂ ಜೊತೆ ಮಾತಾಡ್ತೇನೆ. ಕಾನೂ‌ನಿನ ರೀತಿ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ