Breaking News

ನಿನ್ನೆ ಸಂಜೆ ಗ್ಯಾಸ್ ಲೀಕ್ 18 ಗಂಟೆ ನಂತರ ಆ ರಸ್ತೆ ಮೂಲಕ ವಾಹನ ಸಂಚಾರ ಪುನರಾರಂಭವಾಗಿದೆ.

Spread the love

ಧಾರವಾಡ ಹೈಕೋರ್ಟ್‌ ಪೀಠದ ಎದುರಿಗೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ಗ್ಯಾಸ್ ಲೀಕ್ ಆಗಿದ್ದ ವಾಹನವನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸರು ಯಶಸ್ವಿಯಾಗಿ ತೆರವುಗೊಳಿಸಿದ್ದು, 18 ಗಂಟೆ ನಂತರ ಆ ರಸ್ತೆ ಮೂಲಕ ವಾಹನ ಸಂಚಾರ ಪುನರಾರಂಭವಾಗಿದೆ.

ಗ್ಯಾಸ್ ಸಿಲಿಂಡರ್ ವಾಹನ ಬ್ರಿಡ್ಜ್ ದಾಟುತ್ತಿದ್ದ ವೇಳೆ ಬ್ರಿಡ್ಜ್‌ಗೆ ತಾಗಿ ಗ್ಯಾಸ್ ಲೀಕ್ ಆಗಿತ್ತು. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದರು.

ರಾತ್ರಿಯಿಡಿ ಕಾರ್ಯಾಚರಣೆ ನಡೆಸಿ, ಗ್ಯಾಸ್‌ನ್ನು ಬೇರೆ ವಾಹನಕ್ಕೆ ತುಂಬಿಸುವ ಕೆಲಸ ಮಾಡಿದ್ದರು. ಗ್ಯಾಸ್ ಲೀಕ್ ಆಗಿದ್ದರಿಂದ ಅನಾಹುತ ಸಂಭವಿಸಬಾರದು ಎಂಬ ಕಾರಣಕ್ಕೆ ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದರು. ರಾತ್ರಿಯಿಡಿ ವಾಹನಗಳು ರಸ್ತೆಯಲ್ಲೇ ನಿಂತಿದ್ದವು. ಇದೀಗ ಗ್ಯಾಸ್ ತುಂಬಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ