Breaking News

ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ.

Spread the love

ಬೆಳಗಾವಿ: ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ.

ಕೇವಲ ಮಾಧ್ಯಮಗಳಲ್ಲಿ ಊಹಾಪೋಹಗಳು ಸೃಷ್ಟಿ ಆಗುತ್ತಿವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ‌. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನನ್ನ ಮಾಹಿತಿ ಪ್ರಕಾರ ಯಾರು ಪಕ್ಷ ಬಿಟ್ಟು ಹೋಗುವವರಿಲ್ಲ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ಬಿಜೆಪಿ ಬಿಟ್ಟು ಯಾಕೆ ಹೋಗುತ್ತಾರೆ ಎಂದು ಮಾಜಿ ಸಚಿವರು ಪ್ರಶ್ನಿಸಿದರು.

ಈ ಮೂರು ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ನೌಕರರ ವರ್ಗಾವಣೆ ದಂಧೆ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಹೋಗುವುದಿಲ್ಲ. ರಾತ್ರಿ ಕಂಡ ಬಾವಿಗೆ ಹಗಲು ಯಾರು ಬೀಳುವುದಿಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದು ಗೋವಿಂದ ಕಾರಜೋಳ ಲೇವಡಿ ಮಾಡಿದರು.

ಮುಂದುವರೆದು ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ಶಿವಾಜಿ ಮೂರ್ತಿ ತೆರವು ಮಾಡಿರುವ ವಿಚಾರಕ್ಕೆ, ಸಂಜೆ ಬಾಗಲಕೋಟೆಗೆ ಹೋಗಿ ಈ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದರು.

10ರಿಂದ 15 ಮಂದಿ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ- ಚಲುವರಾಯ ಸ್ವಾಮಿ ಬಾಂಬ್:​ ಕಾಂಗ್ರೆಸ್​ ಪಕ್ಷಕ್ಕೆ ಇತರ ಪಕ್ಷದಿಂದ ಶಾಸಕರು ಸೇರ್ಪಡೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಬಿಜೆಪಿಯವರು ಯಾವ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದರೆ ಕಾಂಗ್ರೆಸ್​ ಮಾತ್ರ ಬಿಜೆಪಿ, ಜೆಡಿಎಸ್​ ಶಾಸಕರು ನಮ್ಮ ಪಾರ್ಟಿ ಸೇರಲಿದ್ದಾರೆ ಎಂದೆ ಹೇಳುತ್ತಿದೆ. ಇದೀಗ ಮೈಸೂರಿನಲ್ಲಿ ಸಚಿವ ಚಲುವರಾಯಸ್ವಾಮಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ