Breaking News

ಡಾ.ರಾಜ್​ಕುಮಾರ್ ಮಗಳು ಲಕ್ಷ್ಮೀ ಅವರ ಮಗ ಷಣ್ಮುಖ ಗೋವಿಂದರಾಜ್ ಬೆಳ್ಳಿ ತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.

Spread the love

ಕನ್ನಡ ಚಿತ್ರರಂಗದಲ್ಲಿ ದೊಡ್ಮನೆ ಅಂದಾಕ್ಷಣ ಸಹಜವಾಗಿ ನೆನಪಾಗುವುದು ಸದಾಶಿವನಗರದಲ್ಲಿರುವ ಡಾ.ರಾಜ್​ಕುಮಾರ್ ಅವರ ಐಷಾರಾಮಿ ಮನೆ. ಅಣ್ಣಾವ್ರಂತೆ ಅವರ ಮೂರು ಮಕ್ಕಳಾದ ಶಿವ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ದಿವಂಗತ ಪುನೀತ್ ರಾಜ್​ಕುಮಾರ್ ಸ್ಟಾರ್ ನಟರಾಗಿ ಮಿಂಚಿದ್ದಾರೆ.

ಇವರು ಮಾತ್ರವಲ್ಲದೇ ಅಣ್ಣಾವ್ರ ಮೊಮ್ಮಕ್ಕಳಾದ ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್, ಧೀರೇನ್ ರಾಮ್ ಕುಮಾರ್, ಧನ್ಯ ರಾಮ್ ಕುಮಾರ್ ಹಾಗು ಶಿವಣ್ಣನ ಮಗಳು ನಿವೇದಿತಾ ಶಿವ ರಾಜ್​ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಅಷ್ಟಕ್ಕೂ ಯಾರು ಅಂತೀರಾ? ಆಕಸ್ಮಿಕ, ಜೀವನ ಚೈತ್ರ, ರಥಸಪ್ತಮಿ, ಭಕ್ತ ಪ್ರಹ್ಲಾದ, ಭಾಗ್ಯವಂತ, ವಸಂತ ಗೀತಾ, ಹೀಗೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಎಸ್.ಗೋವಿಂದರಾಜ್ ಹಾಗೂ ಅಣ್ಣಾವ್ರ ಮಗಳು ಲಕ್ಷ್ಮೀ ಅವರ ಮಗ ಷಣ್ಮುಖ ಗೋವಿಂದರಾಜ್ ಈಗ ಬೆಳ್ಳಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.

‘ಚಿನ್ನದ ಮಲ್ಲಿಗೆ ಹೂವೇ’: ಈ ಸಿನಿಮಾಗೆ ‘ಚಿನ್ನದ ಮಲ್ಲಿಗೆ ಹೂವೇ’ ಅಂತ ಟೈಟಲ್ ಇಡಲಾಗಿದೆ. ಈ ಹಿಂದೆ ನವಿಲು ಗರಿ ಎಂಬ ಸಿನಿಮಾ ನಿರ್ದೇಶನ ಮಾಡಿದ್ದ ನವೀನ್ ಪಿ.ಎ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ ಸಾರಾ ವಜ್ರ ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ ಇದೀಗ ಈ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ನಿರ್ಮಾಪಕಿಯಾಗಿ ಗುರುತಿಸಿಕೊಳ್ಳಲಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ