Breaking News

ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು: ವಿನಯ ಕುಲಕರ್ಣಿ

Spread the love

ವಿಜಯಪುರ: ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಾಕಷ್ಟು ಜನರು ಇದ್ದಾರೆ.

ಎರಡುವರೆ ವರ್ಷದಲ್ಲಿ ಪೂರ್ಣ ಟೀಂ ಬದಲಾಗಲಿದೆ. ಆಗ ಉಳಿದವರಿಗೂ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ. 135 ಜನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ 34 ಶಾಸಕರಿಗೆ ಸಚಿವ ಸ್ಥಾನ ದೊರೆಯುತ್ತದೆ. ಹೀಗಾಗಿ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದರು.

ನಿಗಮ ಮಂಡಳಿಗೆ 30 ಶಾಸಕರು ಆಯ್ಕೆಯಾದರೆ ಉಳಿದವರು, ಮುಂದಿನ ದಿನಗಳಲ್ಲಿ ಸಚಿವರಾಗಬಹುದು. ಆಗ ಎಲ್ಲ ಶಾಸಕರಿಗೂ ಅವಕಾಶ ಸಿಕ್ಕಂತಾಗುತ್ತದೆ. ಸದ್ಯ ಇರುವ ಸಚಿವರು ಸಮರ್ಥರಿದ್ದಾರೆ. ಅವರಿಗೆ ಕೊಟ್ಟ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಅನಾವಶ್ಯಕವಾಗಿ ಡಿಕೆಶಿ ಅವರನ್ನು ಸೂಪರ್ ಸಿಎಂ ಎನ್ನುತ್ತಿದ್ದಾರೆ. ನಮ್ಮಲ್ಲಿ ಎಲ್ಲರೂ ಸೂಪರ್ ಆಗಿದ್ದಾರೆ ಎಂದು ಸಮರ್ಥಿಸಿಕೊಂಡರು.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ