Breaking News

ಯೋಧರ ಸೇವೆ ಸದಾ ಸ್ಮರಣೀಯ..’: ಲಡಾಖ್‌ ದುರಂತಕ್ಕೆ ಮೋದಿ, ಖರ್ಗೆ, ರಾಹುಲ್‌ ಸೇರಿದಂತೆ ಗಣ್ಯರ ಸಂತಾಪ

Spread the love

ನವದೆಹಲಿ : ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಜಿಲ್ಲೆಯ ಕಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ಸೇನಾ ಟ್ರಕ್​ ಆಳವಾದ ಕಂದಕಕ್ಕೆ ಉರುಳಿಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ ಜೆಸಿಒ (Junior Commissioned Officer-JCO) ಸೇರಿದಂತೆ ಒಂಬತ್ತು ಮಂದಿ ಸೈನಿಕರು ಮೃತಪಟ್ಟ ದುರ್ಘಟನೆ ನಿನ್ನೆ ನಡೆದಿದೆ.

ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

ಪ್ರಧಾನಮಂತ್ರಿ ಕಾರ್ಯಾಲಯವು ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ, “ಲೇಹ್ ಬಳಿ ಸಂಭವಿಸಿದ ದುರ್ಘಟನೆಯಿಂದ ನಾವು ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ದೇಶಕ್ಕೆ ಅವರು ನೀಡಿದ ಸೇವೆಯನ್ನು ಯಾವಾಗಲೂ ಸ್ಮರಿಸಲಾಗುವುದು. ರಾಷ್ಟ್ರಕ್ಕೆ ಯೋಧರ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ತಿಳಿಸಿದೆ.

 

 

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಲಡಾಖ್‌ನ ಲೇಹ್ ಬಳಿ ಸಂಭವಿಸಿದ ಅಪಘಾತದಲ್ಲಿ ನಮ್ಮ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖ ತಂದಿದೆ. ದೇಶಕ್ಕೆ ಅವರ ಅನುಕರಣೀಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು, ಗಾಯಗೊಂಡ ಸಿಬ್ಬಂದಿಯನ್ನು ಫೀಲ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ

Spread the love ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ ಬೆಳಗಾವಿ ನಗರದಲ್ಲಿರುವ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ