Breaking News

ಪಿಎಂ ಮಿತ್ರ ಟೆಕ್ಸ್​ ಟೈಲ್​ ಪಾರ್ಕ್.. ಒಂದು ತಿಂಗಳಲ್ಲಿ ಜಮೀನು ಹಸ್ತಾಂತರಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ

Spread the love

ಕಲಬುರಗಿ: ಜಿಲ್ಲೆಯ ಜೇವರ್ಗಿ ರಸ್ತೆಯ ಫಿರೋಜಾಬಾದ್ ಬಳಿ ಕೇಂದ್ರ ಸರ್ಕಾರದ ಪಿಎಂ ಮಿತ್ರ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್​ಟೈಲ್ ಪಾರ್ಕ್‌ಗೆ ಆರಂಭಿಕವಾಗಿ 1,000 ಎಕರೆ ಜಮೀನನ್ನು ಜವಳಿ ಇಲಾಖೆಗೆ ಒಂದು ತಿಂಗಳೊಳಗೆ ಹಸ್ತಾಂತರಿಸಿ, ಆರ್.ಟಿ.ಸಿಯಲ್ಲಿ ಹೆಸರು ಸೇರಿಸಬೇಕೆಂದು ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟೆ ಸಚಿವ ಶಿವಾನಂದ ಎಸ್.

ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 10 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆ ಸಾಕಾರಕ್ಕೆ ಜಮೀನಿನ ಗಡಿ ರೇಖೆ ಗುರುತಿಸುವ ಕೆಲಸ ಬೇಗ ಮುಗಿಸಬೇಕಿದೆ. ಇದರ ಜೊತೆಗೆ ಫೆನ್ಸಿಂಗ್ ಅಥವಾ ತಡೆಗೋಡೆ ನಿರ್ಮಿಸುವ ಮೂಲಕ ಜಮೀನು ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಲಬುರಗಿ ಜಿಲ್ಲೆಯಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ ದರಕ್ಕೆ ಕಬ್ಬು ಪಡೆದು ಇನ್ನು ರೈತರಿಗೆ ಹಣ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ರೈತ ಸಂಘಟನೆಗಳು ತಮ್ಮ ಬಳಿ ದೂರು ನೀಡಿವೆ. ಕೂಡಲೆ ಪರಿಶೀಲಿಸಿ ರೈತರಿಗೆ ಬರಬೇಕಾದ ಬಾಕಿ ಹಣ ಕಾರ್ಖಾನೆಗಳಿಂದ ವಸೂಲಿ ಮಾಡಬೇಕು ಎಂದು ಡಿ.ಸಿ ಅವರಿಗೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ವರುಣ ಕೈಕೊಟ್ಟ ಕಾರಣ ಮತ್ತು ನೀರಿನ ಕೊರತೆಯಿಂದ ಪಕ್ವತೆ ಇಲ್ಲದೆ ಕಬ್ಬಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ. ಆದರಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ನವೆಂಬರ್ 1ರ ನಂತರವೇ ಮಾಡಬೇಕು. ನುರಿಸುವ ಮುನ್ನ ಸಕ್ಕರೆ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಕಾರ್ಖಾನೆಗಳು ಉಲ್ಲಂಘಿಸದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಪೊಲೀಸರಿಗೆ ಗಾಯ

Spread the love ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ