Breaking News

ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಕರ ಸಾವು: 6 ಮಂದಿ ಅಸ್ವಸ್ಥ

Spread the love

ಆಗ್ರಾ(ಉತ್ತರ ಪ್ರದೇಶ): ಭಾನುವಾರ ವಾರಣಸಿಯಿಂದ ಮಥುರಾಗೆ ಪ್ರಯಾಣಿಸುತ್ತಿದ್ದ ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್ (13237) ರೈಲಿನಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಆರು ಮಂದಿ ಅಸ್ವಸ್ಥರಾಗಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಪ್ರಯಾಣಿಕರು ಹವಾನಿಯಂತ್ರಿತವಲ್ಲದ ಸ್ಲೀಪರ್ ಕೋಚ್ ಸಂಖ್ಯೆ ಎಸ್-2ರಲ್ಲಿ ಪ್ರಯಾಣಿಸುತ್ತಿದ್ದರು.

ಪ್ರಯಾಣಿಕರ ಆರೋಗ್ಯ ಹದಗೆಟ್ಟಿರುವ ಕುರಿತು ಆಗ್ರಾದ ರೈಲ್ವೆ ಅಧಿಕಾರಿಗಳಿಗೆ ತುರ್ತು ಕರೆ ಬಂದಿದೆ. ಭಾನುವಾರ ಸಂಜೆ ರೈಲು ಆಗ್ರಾ ಕ್ಯಾಂಟ್ ನಿಲ್ದಾಣಕ್ಕೆ ಆಗಮಿಸಿದ ಬಳಿಕ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಆದರೆ, ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೃತ ಪ್ರಯಾಣಿಕರೊಂದಿಗೆ ಇದ್ದ ಹಲವು ಸದಸ್ಯರು ಕೂಡ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್‌ನಲ್ಲಿ (13237) ಪ್ರಯಾಣಿಕರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವ ಬಗ್ಗೆ ಆಗ್ರಾದ ರೈಲ್ವೆ ಅಧಿಕಾರಿಗಳಿಗೆ ಭಾನುವಾರ ಮಾಹಿತಿ ಸಿಕ್ಕಿತ್ತು. ಈ 8 ಜನರ ಗುಂಪು ವಾರಾಣಸಿಯಿಂದ ಮಥುರಾಗೆ ತೆರಳುತ್ತಿತ್ತು ಎಂದು ಉತ್ತರ ಮಧ್ಯ ರೈಲ್ವೆಯ ಆಗ್ರಾ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಪ್ರಶಸ್ತಿ ಶ್ರೀವಾಸ್ತವ ಹೇಳಿದರು.

ರೈಲು ಆಗ್ರಾ ಕ್ಯಾಂಟ್ ರೈಲು ನಿಲ್ದಾಣಕ್ಕೆ ಬಂದ ಮೇಲೆ ವೈದ್ಯಕೀಯ ತಂಡಗಳನ್ನು ತಕ್ಷಣ ಕಳುಹಿಸಲಾಯಿತು. ವಾಕರಿಕೆ ಮತ್ತು ವಾಂತಿಯಂತಹ ರೋಗಲಕ್ಷಣ ಹೊಂದಿರುವ ಈ ಪ್ರಯಾಣಿಕರನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಯಿತು. ದುರಂತವೆಂದರೆ, ಒಬ್ಬ ವಯಸ್ಸಾದ ಮಹಿಳೆ ಆಗಲೇ ಸಾವನ್ನಪ್ಪಿದ್ದರು. ಬಳಿಕ ಆಗ್ರಾದಲ್ಲಿ ಓರ್ವ ಪುರುಷ ಪ್ರಯಾಣಿಕರು ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾರೆ ಎಂದು ಆಗ್ರಾ ವಿಭಾಗದ ಪಿಆರ್​ಒ ಮಾಹಿತಿ ನೀಡಿದ್ದಾರೆ.

ಮೃತರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಾಥಮಿಕ ವೈದ್ಯಕೀಯ ಮೂಲಗಳ ಪ್ರಕಾರ ಸಾವಿಗೆ ನಿರ್ಜಲೀಕರಣ ಅಥವಾ ವಿಷ ಆಹಾರ ಸೇವನೆ ಸಂಭಾವ್ಯ ಕಾರಣವಿರಬಹುದು ಎಂದು ಶಂಕಿಸಲಾಗಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ