Breaking News

ಪ್ರತಿ ವರ್ಷ ಮನೆಯಲ್ಲಿ ಜೀವಂತ ನಾಗರನಿಗೆ ಪೂಜೆ!

Spread the love

ಶಿರಸಿ (ಉತ್ತರಕನ್ನಡ) : ಇಂದು ನಾಗರ ಪಂಚಮಿ ಹಬ್ಬ. ಶಿರಸಿಯ ಉರಗ ಪ್ರೇಮಿಯೊಬ್ಬರು ಜೀವಂತ ನಾಗರಹಾವಿನ ಮರಿಗೆ ಹಾಲೆರೆದು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಉರಗ ಲೋಕದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಶಾಂತ್ ಹುಲೇಕಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಿಜ ನಾಗರಹಾವಿಗೆ ಹಾಲೆರೆದು ನಾಗರ ಪಂಚಮಿ ಆಚರಿಸಿದರು. ಪ್ರತಿ ವರ್ಷ ನಾಗರ ಪಂಚಮಿ ದಿನದಂದು ಪ್ರಶಾಂತ್​, ನಿಜನಾಗರ ಹಾವಿಗೆ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಮರಿ ನಾಗರ ಹಾವಿಗೆ ಪೂಜೆ ಮಾಡಿದ್ದು ವಿಶೇಷವಾಗಿತ್ತು. ಪ್ರಶಾಂತ್ ಹುಲೇಕಲ್ ಕಳೆದ ಮೂವತ್ತೈದು ವರ್ಷಗಳಿಂದಲೂ ಉರಗ ಸಂತತಿಯ ರಕ್ಷಣೆಯಲ್ಲಿ ತೊಡಗಿದ್ದಾರೆ. ಈ ಮೂಲಕ ನಾಗರ ಪಂಚಮಿಯಂದು ಉರಗಗಳ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.

“ನಾನು ಕಳೆದ ಕೆಲವು ವರ್ಷಗಳಿಂದ ಜೀವಂತ ನಾಗರ ಹಾವಿಗೆ ಪೂಜೆ ಮಾಡಿಕೊಂಡು ಬಂದಿದ್ದೇನೆ. ಉರಗ ರಕ್ಷಕನಾಗಿರುವುದರಿಂದ ಹಾವುಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ರೀತಿ ಪೂಜೆ ಮಾಡುತ್ತಿದ್ದೇನೆ. ಹಾವುಗಳ ಮೇಲೆ ನನಗೆ ವಿಶೇಷ ಭಕ್ತಿ ಇದೆ. ಸುತ್ತಮುತ್ತಲಿನ ಜನರಿಗೆ ಹಾವಿನ ಬಗ್ಗೆ ಮಾಹಿತಿ ನೀಡಿ ಅವರಲ್ಲಿಯೂ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇನೆ” ಎಂದು ಪ್ರಶಾಂತ್‌ ಹುಲೇಕಲ್‌ ಹೇಳಿದರು.

ಕುಟುಂಬದ ಹಿರಿಯ ವ್ಯಕ್ತಿ ಸುರೇಶ್​ ಅವರ ಮರಣಾ ನಂತರ ಅವರ ಮಕ್ಕಳಾದ ಪ್ರಶಾಂತ್, ಪ್ರಕಾಶ್​ ಹಾಗೂ ಪ್ರಣವ್ ನಿಜವಾದ ಹಾವಿಗೆ ಪೂಜೆ ಸಲ್ಲಿಸಿ ನಾಗಪಂಚಮಿ ಆಚರಿಸಿಕೊಂಡು ಬರುತ್ತಿದ್ದಾರೆ. ಮನೆ ಮಂದಿ ಹೂವು, ಅಕ್ಷತೆ ಹಾಕಿ ಆರತಿ ಬೆಳಗಿ ಹಬ್ಬದ ದಿನ ಸಂಭ್ರಮಿಸುತ್ತಾರೆ.

 


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ